ವರದಿ ರಾಯಿ ರಾಜಕುಮಾರ ಮೂಡುಬಿದಿರೆ 

ಮೂಡುಬಿದರೆ ಪುರಸಭೆಯ 15ನೇ ವಾರ್ಡಿನ ಸಮಸ್ಯೆಗಳ ಬಗ್ಗೆ ಪರಿಹಾರ ಕಂಡುಕೊಳ್ಳಲು ಡಿ. 19ರಂದು ಕೊಡಂಗಲ್ಲು ಮಹಾವೀರ ಕಾಲೇಜಿನಿಂದ ಮೂಡುಬಿದಿರೆ ಪುರಸಭೆಗೆ ಬೃಹತ್ ಜಾಥಾ ಮೂಲಕ ಮನವಿ ಅರ್ಪಿಸಲು ನಿರ್ಧರಿಸಲಾಗಿದೆ. 

ಸಂಜೆ 4 ಕ್ಕೆ ಕೊಡಂಗಲ್ಲು ಮಹಾವೀರ ಕಾಲೇಜಿನಿಂದ ಹೊರಡುವ ಜಾಥಾಕ್ಕೆ ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಮಿಥುನ್ ರೈ ಚಾಲನೆ ನೀಡಲಿದ್ದಾರೆ. ಜಾಥಾದಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪ್ರವೀಣ್ ಕುಮಾರ್ ಜೈನ್, ಮೂಡ ಅಧ್ಯಕ್ಷ ಹರ್ಷವರ್ಧನ್ ಪಾಡಿವಾಳ್, ನಗರ ಕಾಂಗ್ರೆಸ್ ಅಧ್ಯಕ್ಷ ಪುರಂದರ ದೇವಾಡಿಗ ಹಾಗೂ ಎಲ್ಲಾ ಪುರಸಭಾ ಸದಸ್ಯರು ಹಾಗೂ ನಾಗರಿಕರು ಭಾಗವಹಿಸಲಿದ್ದಾರೆ ಎಂದು ಪುರಸಭೆಯ ಮಾಜಿ ಅಧ್ಯಕ್ಷೆ ರೂಪ ಸಂತೋಷ್ ಶೆಟ್ಟಿ ತಿಳಿಸಿರುತ್ತಾರೆ.