ಮಂಗಳೂರು:  ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಹಾಗೂ ಕರ್ನಾಟಕ ರಾಜ್ಯ ಸಹಕಾರ ಮಾರಾಟ ಮಹಾಮಂಡಲದ ಅಧ್ಯಕ್ಷ ಸಹಕಾರ ರತ್ನ ಡಾ. ಎಂ ಎನ್ ರಾಜೇಂದ್ರ ಕುಮಾರ್ ಅವರಿಗೆ  ನ್ಯಾಷನಲ್ ಪ್ರೆಸ್ ಕೌನ್ಸಿಲ್ ಆಫ್ ಇಂಡಿಯಾ ಹಾಗೂ ದಿ ನ್ಯೂಸ್ ಪೇಪರ್ಸ್ ಅಸೋಸಿಯೇಷನ್ ಆಫ್ ಕರ್ನಾಟಕ ಬೆಂಗಳೂರು, ಇದರ ವತಿಯಿಂದ ಪ್ರತಿಷ್ಠಿತ ' ಮದರ್ ತೆರೇಸಾ  ಮೆಮೋರಿಯಲ್ ನ್ಯಾಷನಲ್ ಅವಾರ್ಡ್' ಎಂಬ ಬಿರುದಿಗೆ ಆಯ್ಕೆಯಾಗಿದ್ದಾರೆ. 

ಜೂನ್ 6 ರಂದು ನಡೆಯಲಿರುವ ಬೆಂಗಳೂರು ರವೀಂದ್ರ ಕಲಾಕ್ಷೇತ್ರದಲ್ಲಿ ಸಂಘಟಕರ ವತಿಯಿಂದ ಜರಗಲಿರುವ  ಅಂತಾರಾಷ್ಟ್ರೀಯ ದಾದಿಯರ ದಿನಾಚರಣೆಯಂದು ಡಾ. ರಾಜೇಂದ್ರ ಕುಮಾರ್ ಅವರು ಪ್ರಶಸ್ತಿ ಸ್ವೀಕರಿಸಲಿದ್ದಾರೆ ಎಂದು ವರದಿ ತಿಳಿಸಿದೆ.