ಮುಲ್ಕಿ: ಪೊಲೀಸ್ ನಿರೀಕ್ಷಕರಾದ ಕುಸುಮಾಧರ್ ರವರು ಬೇರೆ ಠಾಣೆಗೆ ವರ್ಗಾವಣೆಯ ಹಿನ್ನೆಲೆಯಲ್ಲಿ ಕಿನ್ನಿಗೋಳಿ ಕನ್ಸೆಟ್ ಆಸ್ಪತ್ರೆಯ ಸಾಮಾಜಿಕ ಸೇವಾ ಕಾರ್ಯಕರ್ತೆಯಾಗಿ ಸೇವೆ ಸಲ್ಲಿಸುತ್ತಿರುವ ಹಾಗೂ ಐಕಳ ಗ್ರಾಮ ಪಂಚಾಯತ್ನ ಮಾಜಿ ಅಧ್ಯಕ್ಷರಾದ ಪದ್ಮಿನಿ ವಸಂತ್ ರವರು ಮುಲ್ಕಿ ಪೊಲೀಸ್ ನಿರೀಕ್ಷಕರಾದ ಕುಸುಮಾಧರ್ ಅವರು ನೆನಪಿನ ಕಾಣಿಕೆ ನೀಡಿ ಅವರ ಅವಧಿಯಲ್ಲಿ ಮಾಡಿದ ಉತ್ತಮ ಸೇವೆಯನ್ನು ಸ್ಮರಿಸಿ ಮಾತನಾಡಿ ಮುಲ್ಕಿ ಪೊಲೀಸ್ ಠಾಣ ವ್ಯಾಪ್ತಿಯಲ್ಲಿ ನಿಷ್ಠೆ ಮತ್ತು ಪ್ರಾಮಾಣಿಕತೆಯಿಂದ ಜನರ ಕಷ್ಟಕ್ಕೆ ಸ್ಪಂದಿಸುತ್ತಾ ಹಲವು ಜನರಿಗೆ ಸಹಾಯ ಮಾಡುತ್ತಿರುವುದನ್ನು ಕಂಡು ಜನರು ಗುರುತಿಸಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುಲ್ಕಿ ಪೊಲೀಸ್ ಠಾಣೆಯ ಉಪನಿರೀಕ್ಷಕತರಾದ ವಿನಾಯಕ್ ತೋರಗಲ್ ಮಾರುತಿ ಜಯರಾಮ್ ಮತ್ತಿತರರು ಉಪಸ್ಥಿತರಿದ್ದರು.