ಮಂಗಳೂರು,ಮಾ.11:-ಕರ್ನಾಟಕ ಮಾಧ್ಯಮ ಅಕಾಡೆಮಿ, ಬೆಂಗಳೂರು, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಕಾಲೇಜು (ಸ್ವಾಯತ್ತ), ಉಜಿರೆ, ಪದವಿ ಮತ್ತು ಸ್ನಾತಕೋತ್ತರ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ ವಿಭಾಗ ಹಾಗೂ ಡಿಜಿಟಲ್ ಮೀಡಿಯಾ ಮತ್ತು ಫಿಲ್ಮ್ ಮೇಕಿಂಗ್ ಬಿ.ವೊಕ್ ಪದವಿ ವಿಭಾಗದ ಜಂಟಿ ಆಶ್ರಯದಲ್ಲಿ ಮಾರ್ಚ್ 13 ಮತ್ತು 14 ರಂದು “ಸಮೂಹ ಮಾಧ್ಯಮ ವೃತ್ತಿಪರತೆ ಮತ್ತು ಸದ್ಯದ ಸವಾಲುಗಳು” ರಾಷ್ಟ್ರೀಯ ವಿಚಾರ ಸಂಕಿರಣ ಕಾರ್ಯಕ್ರಮ ಆಯೋಜಿಸಲಾಗಿದೆ.
ಈ ಕಾರ್ಯಕ್ರಮದಲ್ಲಿ ಅಕಾಡೆಮಿ ಅಧ್ಯಕ್ಷರಾದ ಆಯೇಶಾ ಖಾನಂ ಅವರು ಪ್ರಧಾನ ಆಶಯ ನುಡಿಗಳನ್ನಾಡುವರು. ನಂತರ ನಡೆಯುವ ಗೋಷ್ಠಿಯಲ್ಲಿ “ನಾಲ್ಕನೇ ಸ್ತಂಭ” (Fourth Pillar) ಎಂಬ ವಿಷಯದ ಕುರಿತು ಪ್ಯಾನೆಲ್ ಚರ್ಚೆ (Panel Discussion) ಯನ್ನು ಹಿರಿಯ ಪತ್ರಕರ್ತ ಸುಭಾಷ್ ಹೂಗಾರ್ ನಡೆಸಿಕೊಡಲಿದ್ದಾರೆ ಎಂದು ಕರ್ನಾಟಕ ಮಾಧ್ಯಮ ಅಕಾಡೆಮಿ ಕಾರ್ಯದರ್ಶಿ ಸಹನಾ ಎಂ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.