ವರದಿ ರಾಯಿ ರಾಜಕುಮಾರ ಮೂಡುಬಿದಿರೆ 


ದಕ್ಷಿಣ ಕನ್ನಡ ಜಿಲ್ಲೆಯ ಮೂಡುಶೆಡ್ಡೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎದುರು ಪದವಿನಲ್ಲಿ ತಡೆಗೋಡೆ ಕುಸಿದು ಮನೆಗಳಿಗೆ ತೀವ್ರ ಹಾನಿಯಾಗಿದೆ. 

ಇತ್ತೀಚೆಗೆ ತೀವ್ರವಾಗಿ ಸುರಿದ ಮಳೆಗೆ ತಡೆಗೋಡೆ ಕುಸಿದು ಬಿದ್ದು ಮನೆಯ ಗೋಡೆ, ಇತ್ಯಾದಿಗೆ ಹಾನಿಯಾಗಿದೆ. ಸ್ಥಳಕ್ಕೆ ಶಾಸಕ ಉಮಾನಾಥ ಕೋಟ್ಯಾನ್, ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸಾಧ್ಯವಿರುವ ಸಹಾಯ ಒದಗಿಸುವ ಭರವಸೆ ನೀಡಿದರು.