ಮಂಗಳೂರು ಉತ್ತರ ವಲಯಕ್ಷೇತ್ರ ಶಿಕ್ಷಣಾಧಿಕಾರಿಗಳ ಕಛೇರಿ ಸಹಯೋಗದಲ್ಲಿ ಪ್ರೌಢ ಶಾಲಾ ವಿದ್ಯಾರ್ಥಿಗಳಿಗೆ  ತಾಲೂಕು ಮಟ್ಟದ ವಿಜ್ಞಾನ ನಾಟಕ ಮತ್ತು ವಿಚಾರ ಗೋಷ್ಠಿ ಸ್ಪರ್ಧೆಗಳನ್ನು ಮಂಗಳವಾರ ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದಲ್ಲಿ  ಆಯೋಜಿಸಲಾಗಿತ್ತು. 

ಕಾರ್ಯಕ್ರಮವನ್ನು ಉದ್ಘಾಟಿಸಿದ ಮಂಗಳೂರು ಉತ್ತರ ವಲಯ ಶಿಕ್ಷಣ ಸಂಯೋಜಕ ರಮೇಶ ಆಚಾರ್ಯ ಬಿ. ಜಿ. ಮಾತನಾಡಿ, ವಿಜ್ಞಾನ, ತಂತ್ರಜ್ಞಾನ ಹಲವು ಕ್ಷೇತ್ರಗಳಲ್ಲಿ ಈಗ ನಮಗೆ ಸವಾಲುಗಳನ್ನು ಎದುರಿಸುವ ಸಾಮಾಥ್ರ್ಯ ನೀಡಿದೆ. ಕ್ವಾಂಟಮ್ ಕಂಪ್ಯೂಟಿಂಗ್, ಕೃತಕ ಬುದ್ಧಿಮತ್ತೆ ಇತ್ಯಾದಿಗಳ ಭವಿಷ್ಯದ ತಂತ್ರಜ್ಞಾನ ಮನುಕುಲಕ್ಕೆ ಹಲವು ಅನಿರೀಕ್ಷಿತ ಸೌಲಭ್ಯಗಳನ್ನು ನೀಡಲಿದೆ. ಇದನ್ನು ಜಾಗ್ರತೆಯಿಂದ ಉಪಯೋಗಿಸುವುದು ನಮ್ಮ ಕರ್ತವ್ಯ ಎಂದರು. ಇಂತಹ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ವಿಜ್ಞಾನದ ಬಗ್ಗೆ ಒಲವು ಮೂಡಿಸುವ ಜತೆಗೆ ವೈಜ್ಞಾನಿಕ ಮನೋಭಾವನೆ ಬೆಳೆಸಿಕೊಳ್ಳಲು ಸಹಕಾರಿಯಾಗಲಿದೆ ಎಂದು ಹೇಳಿದರು.

ಪಿಲಿಕುಳ ಅಭಿವೃದ್ಧಿ ಪ್ರಾಧಿಕಾರದ ಆಡಳಿತಾಧಿಕಾರಿ ಡಾ. ಅಶೋಕ ಕೆ.ಆರ್. ಮಾತನಾಡಿ, ವಿದ್ಯಾರ್ಥಿಗಳು ಅವಕಾಶಗಳನ್ನು ಉಪಯೋಗಿಸಿಕೊಂಡು ವಿಜ್ಞಾನದ ಬಗ್ಗೆ ತಮ್ಮ ಅಭಿರುಚಿಯನ್ನು ಬೆಳೆಸಿಕೊಳ್ಳಬೇಕು ಎಂದು ಹೇಳಿದರು. 

ಕರ್ನಾಟಕ ರಾಜ್ಯ ಪ್ರೌಢ ಶಾಲಾ ಸಹ ಶಿಕ್ಷಕರ ಸಂಘ ಮಂಗಳೂರು ಉತ್ತರ ವಲಯದ ಅಧ್ಯಕ್ಷ ವಾಸುದೇವ್ ರಾವ್, ಪಿಲಿಕುಳ ಪ್ರಾದೇಶಿಕ ವಿಜ್ಞಾನ ಕೇಂದ್ರದ ಕ್ಯುರೇಟರ್ ಜಗನ್ನಾಥ್, ಕಾವೂರುಸರಕಾರಿ ಪದವಿ ಪೂರ್ವ ಕಾಲೇಜಿನ ಉಪನ್ಯಾಸಕಿ ಭಕ್ತಾಂಜಲಿ ಉಪಸ್ಥಿತರಿದ್ದರು.

ವಿದ್ಯಾರ್ಥಿಗಳಿಗೆ ಸಮಾನಾಂತರವಾಗಿ ವಿಜ್ಞಾನ ನಾಟಕ ಮತ್ತು ವಿಚಾರಗೋಷ್ಠಿ ಸ್ಪರ್ಧೆಗಳು ನಡೆದವು. ಶಿವರಾಮ್ ನಾಯ್ಕ್ ಕಾರ್ಯಕ್ರಮ ನಿರೂಪಿಸಿದರು. ರಶ್ಮಿ ಕೆ. ಎಂ. ಸ್ವಾಗತಿಸಿ, ಅಂಬಿಕಾ ವಂದಿಸಿದರು.