ಹೆಬ್ರಿ: ಕಾಶ್ಮೀರದ ಪೆಹಲ್ಗಾಮ್,ನಲ್ಲಿ ನಡೆದ ಭಯೋತ್ಪಾದಕ ದಾಳಿಗೆ ಉತ್ತರವಾಗಿ ಭಾರತೀಯ ಸೇನೆಯು ಪಾಕ್ ಆಕ್ರಮಿತ ಕಾಶ್ಮೀರದ ಭಯೋತ್ಪಾದಕ ಶಿಭಿರಗಳ ಮೇಲೆ ಆಪರೇಷನ್ ಸಿಂಧೂರ ಹೆಸರಿನಲ್ಲಿ ನಡೆಸಿದ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಕೈಗೊಂಡಿರುವುದರಿಂದ ದೇಶದ ಸೈನಿಕರಿಗೆ ಶಕ್ತಿ ತುಂಬಲು, ಸೈನಿಕರ ಶ್ರೇಯಸ್ಸಿಗಾಗಿ ಪ್ರಾರ್ಥಿಸಿ ಕಾರ್ಕಳ ಕಾಂಗ್ರೆಸ್ ಮುಖಂಡ ಉದಯ ಶೆಟ್ಟಿ ಮುನಿಯಾಲು ಅವರ ನೇತೃತ್ವದಲ್ಲಿ ಕಡ್ತಲ ಗ್ರಾಮೀಣ ಕಾಂಗ್ರೆಸ್ ವತಿಯಿಂದ ಎಳ್ಳಾರೆ ಲಕ್ಷ್ಮೀ ಜನಾರ್ದನ ದೇವಸ್ಥಾನದಲ್ಲಿ ವಿಶೇಷ ಪೂಜೆ ನಡೆಯಿತು.
ಈ ಸಂದರ್ಭದಲ್ಲಿ ಮಾಜಿ ಸೈನಿಕ ವಿಶ್ವನಾಥ್ ಶೆಟ್ಟಿ, ಕಡ್ತಲ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ಜಗದೀಶ್ ಹೆಗ್ಡೆ, ರಾಘವ ದೇವಾಡಿಗ,ಮಾಜಿ ಸದಸ್ಯೆ ಶಶಿಕಲಾ ಭಟ್, ಸದಸ್ಯ ದೀಕ್ಷಿತ್ ಶೆಟ್ಟಿ, ಅಜಿತ್ ಎಳ್ಳಾರೆ ಶೇಖರ್ ಎಳ್ಳಾರೆ, ರಶಿಕ್, ಪ್ರಶಾಂತ್ ಮೊದಲಾದವರು ಉಪಸ್ಥಿತರಿದ್ದರು.