ಸುಬ್ರಹ್ಮಣ್ಯ-ಮಂಗಳೂರು ಪ್ಯಾಸೆಂಜರ್ ರೈಲ್ವು ಸಂಚಾರ ಸ್ಥಗಿತದಿಂದ ಪುತ್ತೂರು, ಮಂಗಳೂರಿಗೆ ತೆರಳುವ ವಿದ್ಯಾರ್ಥಿಗಳು ತೊಂದರೆ ಅನುಭವಿಸುತ್ತಿದ್ದು, ಕೂಡಲೇ ರೈಲ್ವೇ ಸಂಚಾರವನ್ನು ಪುನರಾರಂಭಿಸಲು ಒತ್ತಾಯಿಸಿ ಎನ್.ಎಸ್.ಯು.ಐ ದಕ್ಷಿಣ ಕನ್ನಡ ಜಿಲ್ಲಾ ಸಮಿತಿ ಮಂಗಳೂರು ಕೇಂದ್ರ ರೈಲ್ವೇ ನಿಲ್ದಾಣದ ಮುಂಭಾಗದಲ್ಲಿ ಪ್ರತಿಭಟನೆ ಗುರುವಾರ(12-2-2021) ನಡೆಯಿತು.

ಈ ಸಂದರ್ಭದಲ್ಲಿ ಎನ್.ಎಸ್.ಯು.ಐ ದಕ್ಷಿಣ ಕನ್ನಡ ಜಿಲ್ಲಾಧ್ಯಕ್ಷ ಸವಾದ್ ಸುಳ್ಯ, ಎನ್.ಎಸ್.ಯು.ಐ ರಾಜ್ಯ ಉಪಾಧ್ಯಕ್ಷ ಫಾರೂಕ್ ಬಯಾಬೆ, ಪ್ರಧಾನ ಕಾರ್ಯದರ್ಶಿ ಸುಹಾನ್ ಅಳ್ವ, ಎನ್.ಎಸ್.ಯು.ಐ ಜಿಲ್ಲಾ ಪ್ರಧಾನ ಕಾರ್ಯದರ್ಶಿಗಳಾದ ರಿಲ್ವಾನ್ ಅಮ್ಮೆಮಾರ್, ಅಬ್ದುಲ್ ರಾಝೀ,ಶಾನ್ ಸಿರಿ, ನಜೀಬ್ ಮಂಚಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.