ಪುತ್ತೂರು: ಸಂತ ಫಿಲೋಮಿನಾ ಸ್ವಾಯತ್ತ ಕಾಲೇಜಿನ ಸಭಾಂಗಣದಲ್ಲಿ ಸೆ. 16 ರಂದು ಹಿಂದಿ ದಿನಾಚರಣೆಯನ್ನು ಆಚರಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಸುಳ್ಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ಹಿಂದಿ ಸಹಾಯಕ ಅಧ್ಯಾಪಕರಾದ ಶ್ರೀ ರಾಮಕೃಷ್ಣ ಕೆ. ಎಸ್. ಇವರು ಹಿಂದಿ ಭಾಷೆಯ ಪ್ರಾಮುಖ್ಯತೆ ಕುರಿತು ಮಾತನಾಡಿ, ನಾವು ಹಿಂದಿ ಎಂಬ ಹೆಸರನ್ನು ಕೇಳಿದಾಗ, ನಮ್ಮೊಳಗೆ ಒಂದು ರೀತಿಯ ಪ್ರಜ್ಞೆ ಮೂಡುತ್ತದೆ, ಆ ಪ್ರಜ್ಞೆಯು ನಮ್ಮನ್ನು ಒಂದಾಗಿಸುತ್ತದೆ. ನಮ್ಮ ಗುರುತು ಇತರ ದೇಶಗಳಲ್ಲಿ ಹಿಂದಿಯಿಂದಲೇ ಇರಬೇಕು. ಹಿಂದಿಯಿಂದ ನಮಗೆ ಮಹತ್ವ ಸಿಗುತ್ತಿದೆ. ನಾವು ಭಾಷೆಯನ್ನು ಕಲಿತರೆ ನಮ್ಮ ಆತ್ಮವಿಶ್ವಾಸ ಹೆಚ್ಚುತ್ತದೆ. ನಮ್ಮಲ್ಲಿ ಆತ್ಮವಿಶ್ವಾಸವಿದ್ದರೆ ಯಾವುದೇ ಕೆಲಸವನ್ನು ಸುಲಭವಾಗಿ ಮಾಡಬಹುದು.ಪ್ರಪಂಚದಾದ್ಯಂತ ಸಾವಿರಾರು ಭಾಷೆಗಳನ್ನು ಮಾತನಾಡುತ್ತಾರೆ, ಅವುಗಳಲ್ಲಿ ಹಿಂದಿ ಮೂರನೇ ಸ್ಥಾನದಲ್ಲಿದೆ. ಹಿಂದಿ ಭಾಷೆಯು ಇಡೀ ದೇಶವನ್ನು ಒಗ್ಗೂಡಿಸುತ್ತದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ ಕಾಲೇಜಿನ ಪ್ರಾಂಶುಪಾಲರಾದ ವಂ ಫಾ. ಡಾ. ಆ್ಯಂಟನಿ ಪ್ರಕಾಶ್ ಮೊಂತೆರೊ ಮಾತನಾಡಿ, ಸಂವಹನವು ಹೃದಯದ ಭಾಷೆ. ವಿದ್ಯಾರ್ಥಿಗಳು ತಮ್ಮ ಭಾಷೆಗಳಲ್ಲಿ ಲೇಖನಗಳನ್ನು ಬರೆಯುವ ಮೂಲಕ ಸೃಜನಾತ್ಮಕವಾಗಿರಬೇಕು. ಬರೆಯುವ ಪ್ರತಿಯೊಬ್ಬರೂ ಹಳೆಯ ಪೀಳಿಗೆಗೆ ಸೇರಿದವರು.. ಅದೇ ರೀತಿ, ನಾವು ಹಿಂದಿ ಭಾಷೆಯಲ್ಲಿ ಲೇಖನಗಳನ್ನು ಬರೆಯಲು ಕಲಿಯಬೇಕು. ನಾವು ನಮ್ಮ ಭಾಷೆಯನ್ನು ಹೃದಯಪೂರ್ವಕವಾಗಿ ಪ್ರೀತಿಸಬೇಕು ಎಂದು ಹೇಳಿದರು.
ಹಿಂದಿ ವಿಭಾಗದ ಮುಖ್ಯಸ್ಥರಾದ ಡಾ. ಡಿಂಪಲ್ ಫೆರ್ನಾಂಡಿಸ್ ಹಾಗೂ ವಿದ್ಯಾರ್ಥಿ ಸಂಯೋಜಕರಾದ ಅಹಮದ್ ರೈಫಾನ್, ಕನೀಸ್ ಫಾತಿಮಾ ವೇದಿಕೆಯಲ್ಲಿ ಉಪಸ್ಥಿತರಿದ್ದರು. ಹಿಂದಿ ದಿನಾಚರಣೆಯ ಅಂಗವಾಗಿ ವಿದ್ಯಾರ್ಥಿಗಳಿಗೆ ವಿವಿಧ ಸ್ಪರ್ಧೆಗಳನ್ನು ಕಾಲೇಜಿನ ಹಿಂದಿ ವಿಭಾಗದಿಂದ ಆಯೋಜಿಸಿ, ಬಹುಮಾನವನ್ನು ವಿತರಿಸಲಾಯಿತು. ನಂತರ ಸಾಂಸ್ಕೃತಿಕ ಕಾರ್ಯಕ್ರಮವನ್ನು ಆಯೋಜಿಸಲಾಯಿತು.
ಕಾರ್ಯಕ್ರಮವು ಅಶ್ವಿನಿ ಮತ್ತು ತಂಡದವರಿಂದ ಪ್ರಾರ್ಥನೆಯೊಂದಿಗೆ ಆರಂಭವಾಯಿತು. ಹಿಂದಿ ಪ್ರಾಧ್ಯಪಕಿ ಡಿಂಪಲ್ ತಾವ್ರೋ ಮುಖ್ಯ ಅತಿಥಿಯನ್ನು ಪರಿಚಯಿಸಿದರು. ವಿದ್ಯಾರ್ಥಿಯಾದ ಮುಕ್ಷಿತ್ ಸ್ವಾಗತಿಸಿ, ಅಹದ್ ವಂದಿಸಿದರು. ದಿಲ್ ಶಾನ, ಕನೀಸ್ ಹಾಗೂ ಸೃಷ್ಟಿ ಕಾರ್ಯಕ್ರಮ ನಿರೂಪಿಸಿದರು.