ಮಂಗಳೂರು: ಕರ್ನಾಟಕ ಶಿಕ್ಷಕರ ಅರ್ಹತಾ ಪರೀಕ್ಷೆ 2025ರ ಪ್ರವೇಶ ಪತ್ರವನ್ನು ಇಲಾಖಾ ವೆಬ್‍ಸೈಟ್: https://schooleducation.karnataka.gov.in/ ರಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳು ತಮ್ಮ ಯೂಸರ್ ಐಡಿ ಮತ್ತು ಪಾಸ್‍ವರ್ಡನ್ನು ಬಳಸಿ ತಮ್ಮ ಪರೀಕ್ಷಾ ಪ್ರವೇಶ ಪತ್ರವನ್ನು ಮುದ್ರಿಸಿಕೊಳ್ಳಬಹುದು. ಪ್ರ
ವೇಶ ಪತ್ರದಲ್ಲಿ ನಮೂದಿಸಿರುವ ವಿವರಗಳನ್ನು ಪಾಲಿಸಬೇಕು. ಎಲ್ಲಾ ಅಭ್ಯರ್ಥಿಗಳು ತಮ್ಮ ಪ್ರವೇಶ ಪತ್ರದೊಂದಿಗೆ ಪರೀಕ್ಷಾ ಕೇಂದ್ರಕ್ಕೆ ಹಾಜರಾಗಬೇಕು ಎಂದು ಶಾಲಾ ಶಿಕ್ಷಣ ಇಲಾಖೆ ಕೇಂದ್ರೀಕೃತ ದಾಖಲಾತಿ ಘಟಕದ ಜಂಟಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.