ಮಡಂತ್ಯಾರು: ಸೇಕ್ರೆಡ್ ಹಾರ್ಟ್ ವಿದ್ಯಾ ಸಂಸ್ಥೆಗಳ ವತಿಯಿಂದ 75ನೇ ಸ್ವಾತಂತ್ರ್ಯೋತ್ಸವವನ್ನು ಅತ್ಯಂತ ಅದ್ದೂರಿಯಾಗಿ ಆಚರಿಸಲಾಯಿತು. ಸೇಕ್ರೆಡ್ ಹಾರ್ಟ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ|ಬೇಸಿಲ್ ವಾಸ್ ಧ್ವಜಾರೋಹಣ ನೆರವೇರಿಸಿದರು. ಹಿರಿಯರು ಗಳಿಸಿಕೊಟ್ಟ ಸ್ವಾತಂತ್ರ್ಯವನ್ನು ಉಳಿಸಿ ಬೆಳೆಸುವುದು ನಮ್ಮೆಲ್ಲರ ಆದ್ಯ ಕರ್ತವ್ಯ. ದೇಶದ ಸಂವಿಧಾನ ,ಸಂಸ್ಕೃತಿ ,ಕಾನೂನಿಗೆ ಗೌರವ ಕೊಟ್ಟು ಯಾರಿಗೂ ತೊಂದರೆ ಕೊಡದೆ ಭಾರತೀಯನಾಗಿ ಬದುಕುವುದು ದೇಶಕ್ಕೆ ಕೊಡುವ ಪ್ರಥಮ ಗೌರವ. ಕಾನೂನು, ಸೌಹಾರ್ದತೆ, ಸಾಮರಸ್ಯಕ್ಕೆ ಧಕ್ಕೆ ತರದೆ ಸಾಮಾಜಿಕ ಸೇವೆಯಲ್ಲಿ ತೊಡಗಿಸಿಕೊಂಡರೆ ದೇಶ ಸೇವೆ ಮಾಡಿದಂತೆ ಎಂದು ಅವರು ತಮ್ಮ ಸಂದೇಶವನ್ನು ನೀಡಿದರು.
ಸೇಕ್ರೆಡ್ ಹಾರ್ಟ್ ಚರ್ಚ್ ನ ಸಹಾಯಕ ಧರ್ಮ ಗುರುಗಳಾದ ವಂ|ವಿಲಿಯಂ ಡಿ ಸೋಜ ,ಸೇಕ್ರೆಡ್ ಹಾರ್ಟ್ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷ ಲಿಯೋ ರೊಡ್ರಿಗಸ್, ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವಂ|ಜೆರೊಮ್ ಡಿಸೋಜಾ, ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕರಾದ ವಂ| ದೀಪಕ್ ಡೇಸಾ, ಕನ್ನಡ ಮಾಧ್ಯಮ ಪ್ರೌಢ ಶಾಲಾ ಮುಖ್ಯ ಶಿಕ್ಷಕರಾದ ಮೋಹನ್ ನಾಯಕ್, ಗಾರ್ಡಿಯನ್ ಏಂಜಲ್ಸ್ ಹಿ.ಪ್ರಾ.ಶಾಲೆಯ ಮುಖ್ಯ ಶಿಕ್ಷಕಿ ಹೆಲೆನ್ ಲೊಬೊ ವೇದಿಕೆಯಲ್ಲಿ ಉಪಸ್ಥಿತರಿದ್ದರು.
ಎನ್. ಸಿ.ಸಿ,ಎನ್.ಎಸ್.ಎಸ್,ಗೈಡ್ಸ್, ಮುಂತಾದ ತಂಡಗಳಿಂದ ಆಕರ್ಷಕ ಪಥ ಸಂಚಲನ ಜರುಗಿತು.ಇದೇ ಸಂದರ್ಭ ಆಜಾದಿ ಕಾ ಅಮೃತ ಮಹೋತ್ಸವದ ಪ್ರಯುಕ್ತ ಜರುಗಿದ ವಿವಿಧ ಸ್ಫರ್ಧೆಗಳ ಬಹುಮಾನಗಳನ್ನು ವಿತರಿಸಲಾಯಿತು. ಸೇಕ್ರೆಡ್ ಹಾರ್ಟ್ ಪದವಿ ಕಾಲೇಜಿನ ಉಪನ್ಯಾಸಕರಾದ ಜೋಸೆಫ್ ಎನ್. ಎಂ ಸ್ವಾಗತಿಸಿ,ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಮುಖ್ಯ ಶಿಕ್ಷಕರಾದ ವಂ|ದೀಪಕ್ ಡೇಸಾ ವಂದಿಸಿದರು,ನೆಲ್ಸನ್ ಮೊನಿಸ್ ಕಾರ್ಯಕ್ರಮ ನಿರೂಪಿಸಿದರು. ವಿದ್ಯಾರ್ಥಿಗಳಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.