ಪುತ್ತೂರು: ಕರ್ನಾಟಕ ರಾಜ್ಯದ ಕನ್ನಡ ಮತ್ತು ಸಂಸ್ಕøತಿ ಇಲಾಖೆಯ ಆದೇಶದಂತೆ ಸಂತ ಫಿಲೋಮಿನಾ ಕಾಲೇಜಿನ ಲಲಿತ ಕಲಾ ಸಂಘದ ಆಶ್ರಯದಲ್ಲಿ ಕರ್ನಾಟಕ ರಾಜ್ಯೋತ್ಸವವನ್ನು ಅಕೋಬರ್ 28 ರಂದು ಕಾಲೇಜಿನ ಸ್ನಾತಕೋತ್ತರ ಅಧ್ಯಯನ ಕೇಂದ್ರದ ಸಭಾ ಭವನದಲ್ಲಿ ಆಚರಿಸಲಾಯಿತು.
ಕಾಲೇಜಿನ ಪ್ರಾಚಾರ್ಯ ಪ್ರೊ. ಲಿಯೋ ನೊರೊನ್ಹಾ ಕನ್ನಡ ನಾಡು, ನುಡಿ, ನೆಲ, ಜಲ, ಭಾಷೆ, ಸಾಹಿತ್ಯ ಮತ್ತು ಸಂಸ್ಕøತಿಯ ಕುರಿತು ಮಾತನಾಡಿದರು. ಸಹಾಯಕ ಪ್ರಾಧ್ಯಾಪಕ ಹಾಗೂ ಲಲಿತ ಕಲಾ ಸಂಘದ ಸಂಯೋಜಕ ಪ್ರಶಾಂತ್ ರೈ ನಿರ್ದೇಶನದಲ್ಲಿ ವಿದ್ಯಾರ್ಥಿಗಳು ಕನ್ನಡ ಗೀತಗಾಯನವನ್ನು ಪ್ರಸ್ತುತ ಪಡಿಸಿದರು. ಕಾರ್ಯಕ್ರಮ ಸಂಯೋಜನೆಯಲ್ಲಿ ಸಹಾಯಕ ಪ್ರಾಧ್ಯಾಪಕರಾದ ಅಭಿಷೇಕ ಸುವರ್ಣ, ಪ್ರವೀಣ್ ಡಿ’ಸೋಜ ಮತ್ತು ವಿಪಿನ್ ನಾೈಕ್ ಸಹಕರಿಸಿದರು.