ಮಂಗಳೂರು: ಜೂನ್ 9 ರಿಂದ ಜೂನ್ 20 ರವರೆಗೆ ದ್ವಿತೀಯ ಪಿ.ಯು.ಸಿ ಪರೀಕ್ಷೆ- 3  ನಡೆಯಲಿದ್ದು, ಪರೀಕ್ಷೆ ನಡೆಯುವ ಪರೀಕ್ಷಾ ಕೇಂದ್ರಗಳಲ್ಲಿ ಕಾನೂನು ಬಾಹಿರ ಚಟುವಟಿಕೆ, ಅಹಿತಕರ ಘಟನೆಗಳು ನಡೆಯದಂತೆ ಮತ್ತು ಪರೀಕ್ಷೆಗಳನ್ನು ಶಾಂತಿಯುತವಾಗಿ, ಸುಸೂತ್ರವಾಗಿ ಹಾಗೂ ದೋಷರಹಿತವಾಗಿ ನಡೆಸುವ ನಿಟ್ಟಿನಲ್ಲಿ ಜೂನ್ 9 ರಿಂದ ಜೂನ್ 20 ರವರೆಗೆ ಪರೀಕ್ಷೆ- 3 ನಡೆಯುವ ದಕ್ಷಿಣ ಕನ್ನಡ ಜಿಲ್ಲಾ ಪೊಲೀಸ್  ವ್ಯಾಪ್ತಿಯಪುತ್ತೂರು ತಾಲೂಕಿನ ದರ್ಬೆಸೈಂಟ್ ಫಿಲೋಮಿನಾ ಪಿ.ಯು ಕಾಲೇಜು, ಬೆಳ್ತಂಗಡಿಸರ್ಕಾರಿ ಪದವಿ ಪೂರ್ವ ಕಾಲೇಜು, ಸುಳ್ಯತಾಲೂಕಿನಗಾಂಧಿನಗರಸರ್ಕಾರಿ ಪದವಿ ಪೂರ್ವ ಕಾಲೇಜು, ಬಂಟ್ವಾಳ ತಾಲೂಕಿನ ಬಿ ಮೂಡಾಸರ್ಕಾರಿ ಪದವಿ ಪೂರ್ವ ಕಾಲೇಜುಪರೀಕ್ಷಾ ಕೇಂದ್ರಗಳ ಸುತ್ತಮುತ್ತಲಿನ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ ಜಿಲ್ಲಾಧಿಕಾರಿ ಡಾ. ಆನಂದ್ ಕೆ  ಆದೇಶಿಸಿದ್ದಾರೆ.