ಮಂಗಳೂರು: ಸಂತ ಅಲೋಶಿಯಸ್ ಪ.ಪೂ. ಕಾಲೇಜಿನಲ್ಲಿ ನಡೆದ ದ.ಕ. ಜಿಲ್ಲಾ ಮಟ್ಟದ ಪದವಿಪೂರ್ವ ಕಾಲೇಜುಗಳ ಬಾಲಕ ಮತ್ತು ಬಾಲಕಿಯರ ಈಜು ಸ್ಪರ್ಧೆಯಲ್ಲಿ ಶಕ್ತಿ ಪ.ಪೂ. ಕಾಲೇಜಿನ ವಿದ್ಯಾರ್ಥಿಗಳು ಭಾಗವಹಿಸಿ ಪದಕಗಳನ್ನು ಪಡೆದಿರುತ್ತಾರೆ.
ದೇಹಿಕಾ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ 2 ಬೆಳ್ಳಿ ಪದಕ ಹಾಗೂ 1ಕಂಚಿನ ಪದಕ ಪಡೆದು ರಾಜ್ಯಮಟ್ಟದ ಸ್ಪರ್ಧೆಯಲ್ಲಿ ದ.ಕ. ಜಿಲ್ಲಾ ತಂಡವನ್ನು ಪ್ರತಿನಿಧಿಸಲು ಅಯ್ಕೆಯಾಗಿರುತ್ತಾರೆ.
ಅದಿತ್ ಪ್ರಥಮ ಪಿಯುಸಿ ವಿಜ್ಞಾನ ವಿಭಾಗ 1ಕಂಚಿನ ಪದಕ ಪಡೆದಿರುತ್ತಾರೆ ಹಾಗೂ ಕಾಲೇಜು ಬಾಲಕರ ತಂಡ 4x100 ರಿಲೇ ಸ್ಪರ್ಧೆಯಲ್ಲಿ ಕಂಚಿನ ಪದಕವನ್ನು ಪಡೆದಿರುತ್ತಾರೆ.
ಈ ಸಂದರ್ಭದಲ್ಲಿ ವಿಜೇತರನ್ನು ಸಂಸ್ಥೆಯ ಸಂಸ್ಥಾಪಕರಾದ ಡಾ. ಕೆ. ಸಿ. ನಾೈಕ್, ಕಾರ್ಯದರ್ಶಿ ಸಂಜಿತ್ ನಾೈಕ್. ಪ್ರಧಾನ ಸಲಹೆಗಾರರಾದ ರಮೇಶ್ ಕೆ. ಶಕ್ತಿ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ವೆಂಕಟೇಶ ಮೂರ್ತಿ ಮತ್ತು ಶಕ್ತಿ ವಸತಿ ಶಾಲೆಯ ಪ್ರಾಂಶುಪಾಲೆಯಾದ ಬಬಿತಾ ಸೂರಜ್ ಅಭಿನಂದಿಸಿದ್ದಾರೆ.