ಚಾಮರಾಜನಗರದಲ್ಲಿ ಸರಕಾರಿ ಮೆಡಿಕಲ್ ಕಾಲೇಜು ಬೋಧನಾ ಆಸ್ಪತ್ರೆಯನ್ನು ಗುರುವಾರ ರಾಷ್ಟ್ರಪತಿ ರಾಮನಾಥ ಕೋವಿಂದ್ ಉದ್ಘಾಟನೆ ಮಾಡಲಿದ್ದು, ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿಯವರು ಪಾಲ್ಗೊಳ್ಳುವರು.
ಚಾಮರಾಜನಗರಕ್ಕೆ ಹೋದರೆ ಮುಖ್ಯಮಂತ್ರಿ ಸ್ಥಾನ ಆರು ತಿಂಗಳೊಳಗೆ ಹೋಗುತ್ತದೆಂಬುದು ಒಂದು ಮೂಢನಂಬಿಕೆ. ಮಾಜೀ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸಹಿತ ಬಹಳ ಮುಖ್ಯಮಂತ್ರಿಗಳು ಚಾಮರಾಜನಗರಕ್ಕೆ ಈ ಕಾರಣಕ್ಕೆ ಹೋಗಿಲ್ಲ.
ಆದರೆ ಮಾಜೀ ಮುಖ್ಯಮಂತ್ರಿ ಎಸ್. ಸಿದ್ದರಾಮಯ್ಯನವರು ಮೂಢನಂಬಿಕೆ ತೊಡೆದು 10ಕ್ಕೂ ಹೆಚ್ಚು ಬಾರಿ ಚಾಮರಾಜನಗರಕ್ಕೆ ಹೋಗಿದ್ದರು. ಪೂರ್ಣ ಒಂದು ಅವಧಿ ಆಗಿದ್ದರು. ಈಗ ಬಸವರಾಜ ಬೊಮ್ಮಾಯಿಯವರು ಆ ಹಾದಿಯಲ್ಲಿ ನಡೆದಿದ್ದಾರೆ.