ದಕ್ಷಿಣ ಕನ್ನಡ ಜಿಲ್ಲೆಯ ಸಹಿತ ಹಲವು ಜಿಲ್ಲೆಗಳಲ್ಲಿ ವಾರಾಂತ್ಯ ಕರ್ಫ್ಯೂ ರದ್ದಾಯಿತು. ಮಧ್ಯಾಹ್ನದ ಬಳಿಕ ಕರ್ನಾಟಕದ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಅವರು ಆಯಾ ಜಿಲ್ಲಾಧಿಕಾರಿಗಳು ವಾರಾಂತ್ಯ ಕರ್ಫ್ಯೂ ಬಗೆಗೆ ತಾವೇ ನಿರ್ಧಾರ ತೆಗೆದುಕೊಳ್ಳುವಂತೆ ಸೂಚಿಸಿದರು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಅವರು ಕೂಡಲೆ ವಾರಾಂತ್ಯ ಕರ್ಫ್ಯೂ ರದ್ದು ಪಡಿಸಿ ಆದೇಶ ಹೊರಡಿಸಿದರು. ಎಲ್ಲ ಬಗೆಯ ವ್ಯಾಪಾರ ನಡೆಸುವಂತೆ ಸೂಚಿಸಲಾಗಿದೆ. ರಾತ್ರಿ 9ರಿಂದ ಬೆಳಿಗ್ಗೆ 5 ಗಂಟೆಯವರೆಗೆ ಕರ್ಫ್ಯೂ ಯಥಾವತ್ತಾಗಿ ಮುಂದುವರಿದಿದೆ.