ಮಂಗಳೂರು: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ರಾಜ್ಯ ಮಟ್ಟದಲ್ಲಿ ಉಡುಪಿ ಜಿಲ್ಲೆ ಪ್ರಥಮ ಹಾಗೂ ದಕ್ಷಿಣಕನ್ನಡ ಜಿಲ್ಲೆ ದ್ವಿತೀಯ ಸ್ಥಾನ ಪಡೆದಿರುವುದಕ್ಕೆ ವಿಧಾನಸಭಾ ಸ್ಪೀಕರ್ ಯು.ಟಿ. ಖಾದರ್ ಉಭಯ ಜಿಲ್ಲೆಯ ವಿದ್ಯಾರ್ಥಿಗಳನ್ನು ಅಭಿನಂದಿಸಿದ್ದಾರೆ.
ಶೈಕ್ಷಣಿಕ ಗುಣಮಟ್ಟದಲ್ಲಿ ಸದಾ ಉನ್ನತ ಸ್ಥಾನದಲ್ಲಿರುವ ಅವಿಭಜಿತ ದಕ್ಷಿಣಕನ್ನಡ ಜಿಲ್ಲೆಯು ತನ್ನ ಹಿರಿಮೆಯನ್ನು ಮುಂದುವರಿಸುತ್ತಿರುವುದು ಶ್ಲಾಘನೀಯ. ಕಠಿಣ ಅಧ್ಯಯನ ಪರಿಶ್ರಮಕ್ಕೆ ಇಲ್ಲಿನ ವಿದ್ಯಾರ್ಥಿಗಳು ಹೆಸರುವಾಸಿ. ಇದಕ್ಕಾಗಿ ಉಭಯ ಜಿಲ್ಲೆಗಳ ವಿದ್ಯಾರ್ಥಿಗಳು, ಉಪನ್ಯಾಸಕರು, ಹೆತ್ತವರು ಮತ್ತು ಶಿಕ್ಷಣ ಸಂಸ್ಥೆಗಳನ್ನು ಅಭಿನಂಧಿಸುವುದಾಗಿ ಅವರು ತಿಳಿಸಿದ್ದಾರೆ.