ಎನ್‌ಎಸ್‌ಯುಐ ದಕ್ಷಿಣ ಕನ್ನಡ ಜಿಲ್ಲಾ ನೂತನ ಅಧ್ಯಕ್ಷರಾಗಿ ಸುಹಾನ್ ಆಳ್ವ ಅವರನ್ನು ನೇಮಕಗೊಳಿಸಿ ರಾಷ್ಟ್ರೀಯ ಎನ್‌ಎಸ್‌ಯುಐ ಕಾರ್ಯದರ್ಶಿ ಎರಿಕ್ ಸ್ಟೀಫನ್ ಅವರು ಆದೇಶ ಹೊರಡಿಸಿದ್ದಾರೆ.
ಈ ಮೊದಲು ಸುಹಾನ್ ಆಳ್ವ ಅವರು ಎನ್‌ಎಸ್‌ಯುಐ ರಾಜ್ಯ ಪ್ರಧಾನ ಕಾರ್ಯದರ್ಶಿಯಾಗಿ, ಉತ್ತರ ಕನ್ನಡ, ತುಮಕೂರು ಮತ್ತು ಹುಬ್ಬಳ್ಳಿ ಗ್ರಾಮಾಂತರ ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಉಸ್ತುವಾರಿಯಾಗಿ ಸೇವೆ ಸಲ್ಲಿಸಿದ್ದಾರೆ.