ಸುಳ್ಯ: ಕರ್ನಾಟಕ ರಾಜ್ಯ ಸಹಕಾರ ಮಹಾಮಂಡಳ ಬೆಂಗಳೂರು, ದ. ಕ. ಜಿಲ್ಲಾ ಸಹಕಾರ ಯೂನಿಯನ್ ನಿ., ಮಂಗಳೂರು ದ.ಕ. ಜಿಲ್ಲಾಕೇಂದ್ರ ಸಹಕಾರಿ ಬ್ಯಾಂಕ್ ಲಿ., ಮಂಗಳೂರು ಹಾಗೂ ಸಹಕಾರ ಇಲಾಖೆ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ , ಪಂಜ ಇವರ ಸಂಯುಕ್ತ ಆಶ್ರಯದಲ್ಲಿ ಸುಳ್ಯ ತಾಲೂಕಿನ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳ ನೂತನವಾಗಿ ಆಯ್ಕೆಯಾದ ಆಡಳಿತ ಮಂಡಳಿ ಸದಸ್ಯರು ಮತ್ತು ಸಿಬ್ಬಂಧಿಗಳಿಗೆ ಜಿಲ್ಲಾ ಮಟ್ಟದ ತರಬೇತಿ ಕಾರ್ಯಕ್ರಮ ಮಾರ್ಚ್ 9 ರಂದು ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘ ನಿ., ಇದರ ಸಭಾಂಗಣದಲ್ಲಿ ಜರಗಿತು.
ಈ ತರಬೇತಿಯನ್ನು ಉದ್ಘಾಟಿಸಿದ ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಅಧ್ಯಕ್ಷರಾಧ ಚಂದ್ರಶೇಖರ ಶಾಸ್ತ್ರಿ ಇವರು ಮಾತನಾಡಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘಗಳು ಗ್ರಾಮ ವ್ಯಾಪ್ತಿಯಲ್ಲಿ ಕೆಲಸ ನಿರ್ವಹಿಸುದರಿಂದ ಸಂಘದ ನಿರ್ದೇಶಕರು ಮತ್ತು ಸಿಬ್ಬಂಧಿಗಳಿಗೆ ಹೊಸದಾಗಿ ಜಾರಿಯಾದ ಕಾಯಿದೆ ಕ್ರಮಗಳ ಬಗ್ಗೆ ಇಲಾಖೆಯ ಸುತ್ತೋಲೆಯ ಮಾಹಿತಿ ಅಗತ್ಯ ಎಂದರು, ಅದ್ದರಿಂದ ಇಂತಹ ತರಬೇತಿಯು ಬಹಳ ಉಪಯುಕ್ತವಾಗಿದೆಎಂದರು ಹಾಗೂ ಜಿಲ್ಲಾ ಮಟ್ಟದ ಕಾರ್ಯಕ್ರಮ ಆತಿಥ್ಯ ವಹಿಸಲು ನಮಗೆ ಅವಕಾಶ ಮಾಡಿಕೊಟ್ಟ ಜಿಲ್ಲಾ ಸಹಕಾರಿ ಯೂನಿಯನ್ ಗೆ ಅಭಿನಂದನೆ ಸಲ್ಲಿಸಿದರು.
ದ.ಕ. ಜಿಲ್ಲಾಕೇಂದ್ರ ಸಹಕಾರಿ ಬ್ಯಾಂಕ್ ಇದರ ನಿರ್ದೇಶಕರಾಧ ಎಸ್ .ಎನ್ ಮನ್ಮಥ ಇವರು ಮಾತನಾಡಿ ಸಂಘದ ಪ್ರಗತಿ ಹೊಂದಲು ಸಂಘದ ಅಂಕೆ ಅಂಶಗಳು ನೈಜ ಚಿತ್ರಣ , ನಿರ್ದೆಶಕರು ಮತ್ತು ಸಿಬ್ಬಂದಿಗಳ ಕಾರ್ಯಕ್ಷಮತೆ ಹೆಚ್ಚಿಸಲು ಇಂತಹ ತರಬೇತಿಗಳು ಅವಶ್ಯಕವಾಗಿದೆ ಎಂದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ ದಕ್ಷಿಣಕನ್ನಡ ಜಿಲ್ಲಾ ಸಹಕಾರ ಯೂನಿಯನ್ ಅಧ್ಯಕ್ಷರಾದ ಶಶಿಕುಮಾರ್ ರೈ ಬಾಲ್ಯೊಟ್ಟುರವರು ಮಾತನಾಡಿ, ಕೃಷಿ ಪತ್ತಿನ ಸಹಕಾರ ಸಂಘಗಳನ್ನು ಪ್ರಗತಿ ಪತದಲ್ಲಿ ಮುನ್ನಡೆಯಲು ಸಂಘದ ನಿರ್ದೇಶಕರು ಮತ್ತು ಸಿಬ್ಬಂದಿಗಳ ಪಾತ್ರ ಪ್ರಮುಖವಾಗಿದೆ ಸಹಕಾರ ಕಾಯಿದೆ ನಿಯಮಗಳ ಬಗ್ಗೆ ಎನ್.ಪಿ.ಎ ,ಎಸ್‍ಎಲ್‍ಆರ್ ಈ ವಿಷಯಗಳ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಳ್ಳಬೇಕಾಗಿ ಜಿಲ್ಲಾ ಸಹಕಾರಿ ಯೂನಿಯನ್ ಜಿಲ್ಲೆಯ ಸಹಕಾರ ಸಂಘಗಳನ್ನು ಬಲಪಡಿಸುವ ಕಾರ್ಯವನ್ನು ಇಂತಹ ತರಬೇತಿಗಳ ಮುಖಾಂತರ ಮಾಡಲಾಗುವುದು ಎಂದರು. ಜಿಲ್ಲಾ ಸಹಕಾರಿ ಯೂನಿಯನ್‍ನ ಮುಂದಿನ ವಾರ್ಷೀಕ ಮಹಾಸಭೆಯಲ್ಲಿ ಸದಸ್ಯತ್ವ ಪಡೆದ ಸಂಘಗಳಿಗೆ ಡಿವಿಡೆಂಟ್ ಕೊಡಲು ನಿರ್ಧರಿಸಲಾಗುವುದು ಎಂದರು.
ವೇದಿಕೆಯಲ್ಲಿ ದ.ಕ. ಜಿಲ್ಲಾಕೇಂದ್ರ ಸಹಕಾರ ಬ್ಯಾಂಕ್ ಇದರ ನಿರ್ದೇಶಕರಾದ ಮನ್ಮಥ, ದ.ಕ. ಜಿಲ್ಲಾ ಸಹಕಾರಿ ಯೂನಿಯನ್ ನ ನಿರ್ದೇಶಕರುಗಳಾದ ವಿಷ್ಣು ಭಟ್, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಉಪಾಧ್ಯಕ್ಷರಾದ ಸದಾನಂದಾ ಕಾರ್ಜ ಹಾಗೂ ನಿರ್ದೇಶಕರು ಉಪಸ್ಥಿತರಿದ್ದರು.
ಸಂಪನ್ಮೂಲ ವ್ಯಕ್ತಿಗಳಾದ ಎನ್‍ಜೆ ಗೋಪಾಲ್ ಅಧೀಕ್ಷಕರು ಸಹಕಾರ ಸಂಘಗಳ ಉಪನಿಬಂಧಕರ ಕಛೇರಿ ಮಂಗಳೂರು ಮತ್ತು ವಿಶ್ವನಾಥ ನಾಯರ್ (ನಿವೃತ್ತ) ವ್ಯವಸ್ಥಾಪಕ ನಿರ್ದೇಶಕರು, ದ,ಕ, ಜಿಲ್ಲಾಕೇಂದ್ರ ಸಹಕಾರ ಬ್ಯಾಂಕ್., ಇವರು ತರಬೇತಿ ನೀಡಿದರು.
ಎಸ್.ವಿ. ಹೀರೆಮಠ ಮುಖ್ಯಕಾರ್ಯ ನಿರ್ವಹಣಾಧಿಕಾರಿ ದ.ಕ. ಜಿಲ್ಲಾ ಸಹಕಾರಿ ಯೂನಿಯನ್, ಇವರು ಅತಿಥಿಗಳನ್ನು ಸ್ವಾಗತಿಸಿದರು, ಪಂಜ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಮುಖ್ಯಕಾರ್ಯ ನಿರ್ವಹಣಾಧಿಕಾರಿ ನೇಮಿರಾಜ್ ಪಿ ಇವರು ವಂದಿಸಿದರು. ಚಂದ್ರಶೇಖರ ಇವರು ಕಾರ್ಯಕ್ರಮವನ್ನು ನಿರೂಪಿಸಿದರು,