ಬೆಂಗಳೂರು: ನಟ ಸುದೀಪ್ ಅವರ ಖಾಸಗಿ ವಿಡಿಯೋಗಳನ್ನು ಲೀಕ್‌ ಮಾಡುವುದಾಗಿ ಹೇಳಿರುವ ಬೆದರಿಕೆ ಪತ್ರವೊಂದು ಬಂದಿದ್ದು, ಅಷ್ಟೇ ಅಲ್ಲದೆ ಆ ಪತ್ರದಲ್ಲಿ ಅವಾಚ್ಯ ಶಬ್ದಗಳನ್ನು ಸಹ ಉಲ್ಲೇಖ ಮಾಡಲಾಗಿದೆ ಎನ್ನಲಾಗಿದೆ. ಈ ಬಗ್ಗೆ ಪುಟ್ಟೇನಹಳ್ಳಿ ಪೊಲೀಸ್ ಠಾಣೆಗೆ ಸುದೀಪ್ ಅವರ ಮ್ಯಾನೇಜರ್ ಜಾಕ್ ಮಂಜು ಅವರು ದೂರು ನೀಡಿದ್ದಾರೆ.

ಸುದೀಪ್ ಅವರ ಬೆದರಿಕೆ ಪ್ರಕರಣದ ತನಿಖೆಯನ್ನು ಸಿಸಿಬಿಗೆ  ವರ್ಗಾಯಿಸಲಾಗಿದೆ ಎಂದು  ಬೆಂಗಳೂರು ನಗರ ಕಮಿಷನರ್ ಪ್ರತಾಪ್ ರೆಡ್ಡಿ ಅವರು ತಿಳಿಸಿದ್ದಾರೆ.