ಮಂಗಳೂರು : ಸಾಹಿತ್ಯ ಕೃಷಿಯಿಂದ ತುಳುನಾಡಿನ ಸಂಸ್ಕೃತಿ-ಸಂಸ್ಕಾರ ಉಳಿದಿದೆ, ಹೊಸ ಚಿಗುರುಗಳನ್ನು ಸೂಕ್ತ ವೇದಿಕೆಯ ಮೂಲಕ ಬೆಳೆಸುವ ಕೆಲಸ ನಮ್ಮದಾಗಬೇಕು, ತುಳು ಸಾಹಿತ್ಯ ಅಕಾಡೆಮಿಯು ಇಂತಹ ಕಾರ್ಯಕ್ರಮಗಳಿಗೆ ವಿಶೇಷ ಮಾನ್ಯತೆ ನೀಡುವ ಕೆಲಸ ಮಾಡುವಲ್ಲಿ ಮುಂದಾಗಿರುವುದರಿಂದ ನಿರಂತರವಾಗಿ ಹಮ್ಮಿಕೊಳ್ಳಲು ಕಾರಣವಾಗಿದೆ ಎಂದು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಅಧ್ಯಕ್ಷ ದಯಾನಂದ ಜಿ. ಕತ್ತಲ್ಸಾರ್ ಹೇಳಿದರು. ಅವರು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸಿರಿ ಚಾವಡಿಯಲ್ಲಿ ನಡೆದ ಕನ್ನಡ-ತುಳು ಸಾಹಿತ್ಯೋತ್ಸವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು. ಕನ್ನಡ ಸಾಹಿತ್ಯ ಪರಿಚತ್ನ ಮಾಜಿ ರಾಜ್ಯಾಧ್ಯಕ್ಷ ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರು ಶುಭ ಹಾರೈಸಿದರು. ಕಾರ್ಯಕ್ರಮದಲ್ಲಿ ಸಾಹಿತಿ ಹಾಗೂ ಸಂಘಟಕ ಪಿ. ವಿ. ಪ್ರದೀಪ್ಕುಮಾರ್ ರವರ "ಸೂತ್ರದಾರ" ಕಾದಂಬರಿಯನ್ನು ಅಳುಪ ವಂಶಸ್ಥರು ಹಾಗೂ ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ಡಾ.ಆಕಾಶ್ರಾಜ್ ಜೈನ್ ಅವರು ಲೋಕಾರ್ಪಣೆಗೊಳಿಸಿ, ಶುಭ ಹಾರೈಸಿದರು.ಕಾರ್ಯಕ್ರಮವನ್ನು ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಕಥಾ ಬಿಂದು ಪ್ರಕಾಶನ ಮಂಗಳೂರು, ಕಲ್ಕೂರ ಪ್ರತಿಷ್ಠಾನ ಇವರ ಸಂಯುಕ್ತ ಆಶ್ರಯದಲ್ಲಿ ನಡೆಯಿತು.ಕರ್ನಾಟಕ ಸರಕಾರದ ಕರ್ನಾಟಕ ಅಲೆಮಾರಿ ಮತ್ತು ಅರೆಅಲೆಮಾರಿ ಅಭಿವೃದ್ಧಿ ನಿಗಮದ ಅಧ್ಯಕ್ಷ ಕೆ.ರವೀಂದ್ರ ಶೆಟ್ಟಿ ಉಳಿದೊಟ್ಟು ಅವರು ವಿಶೇಷವಾಗಿ ಮಾತನಾಡಿದರು.
ಡಾ. ಶೇಖರ ಅಜೆಕಾರು ಅಧ್ಯಕ್ಷರು ಪತ್ರಕರ್ತರ ವೇದಿಕೆ. ಉಡುಪಿ ಜಿಲ್ಲೆಯ ಅಧ್ಯಕ್ಷ ಡಾ.ಶೇಖರ ಅಜೆಕಾರು, ನಿವೃತ್ತ ಬ್ಯಾಂಕ್ ಅಧಿಕಾರಿ ಬೆಟ್ಟಂಪ್ಪಾಡಿ ಸುಂದರ ಶೆಟ್ಟಿ, ಬಜಪೆ ವಿಮಾನ ಪ್ರಾಧಿಕಾರದ ನಿವೃತ್ತ ನಿರ್ದೇಶಕ ಎಂ. ಆರ್ ವಾಸುದೇವ, ಕರ್ನಾಟಕ ತುಳು ಸಾಹಿತ್ಯ ಅಕಾಡೆಮಿಯ ಸದಸ್ಯ ನಿಟ್ಟೆ ಶಶಿಧರ್ ಶೆಟ್ಟಿ, ಕಾರ್ಯಕ್ರಮದ ಸದಸ್ಯ ಸಂಚಾಲಕ ನರೇಂದ್ರ ಕೆರೆಕಾಡು ಉಪಸ್ಥಿತರಿದ್ದರು. ಪುತ್ತೂರಿನ ಸತ್ಯಶಾಂತ ಪ್ರತಿಷ್ಠಾನದ ಅಧ್ಯಕ್ಷೆ ಶಾಂತಾ ಕುಂಟೀನಿ ಸ್ವಾಗತಿಸಿದರು, ಕಾರ್ಯಕ್ರಮದ ಸಂಘಟಕ, ಸಾಹಿತಿ ಪಿ.ವಿ.ಪ್ರದೀಪ್ಕುಮಾರ್ ಪ್ರಸ್ತಾವನೆಗೈದರು, ಶ್ರೀ ಗುರು ಚೈತನ್ಯ ಪ್ರತಿಷ್ಠಾನದ ಅಧ್ಯಕ್ಷ ಹೊನ್ನಯ್ಯ ವಂದಿಸಿದರು, ನವೀನ್ ಕುಲಾಲ್ ಮತ್ತು ರಶ್ಮಿ ಸನಿಲ್ ಕಾರ್ಯಕ್ರಮ ನಿರೂಪಿಸಿದರು.