ತುಮಕೂರು: ಸಮಾಜದ ಕಣ್ಣು ತೆರೆಯಿಸಿದ ಶಿವಯೋಗಿ ಸಿದ್ಧರಾಮೇಶ್ವರ ಅವರ ಜೀವನ ಚರಿತ್ರೆ ಹಾಗೂ ಬೋಧನೆಗಳನ್ನು ಸ್ಮರಿಸುವ ಸಲುವಾಗಿ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿಯನ್ನು ಜ.15ರ ಭಾನುವಾರ, ಭಕ್ತಿ ಭಾವ ಹಾಗೂ ಅರ್ಥಪೂರ್ಣವಾಗಿ ಜಿಲ್ಲೆಯಲ್ಲಿ ಆಚರಿಸಲು ನಿರ್ಧರಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಕೆ.ಚನ್ನಬಸಪ್ಪ ಅವರು ತಿಳಿಸಿದರು.
ನಗರದ ಜಿಲ್ಲಾಧಿಕಾರಿಯವರ ಕಚೇರಿ ಸಭಾಂಗಣದಲ್ಲಿ ಇಂದು ಹಮ್ಮಿಕೊಳ್ಳಲಾಗಿದ್ದ ಪೂರ್ವಭಾವಿ ಸಿದ್ಧತಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಆದರ್ಶ ಪುರುಷರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಿ, ಜನರಲ್ಲಿ ಮಹಾತರ ವಿಚಾರಧಾರೆಗಳ ಕುರಿತು ಜಾಗೃತಿ ಮೂಡಿಸಲು ಸಮುದಾಯ ಹಾಗೂ ವಿವಿಧ ಸಂಘಟನೆಗಳ ಸಹಭಾಗಿತ್ವದಲ್ಲಿ, ಮುಂದಿನ ತಿಂಗಳು ಜನವರಿ. 15ರ ಬೆಳಿಗ್ಗೆ 11 ಗಂಟೆಗೆ ನಗರದ ಗಾಜಿನಮನೆಯ ಅದ್ದೂರಿ ವೇದಿಕೆಯಲ್ಲಿ ರಾಜ್ಯಮಟ್ಟದ ಶಿವಯೋಗಿ ಸಿದ್ಧರಾಮೇಶ್ವರ ಜಯಂತಿಯನ್ನು ಅರ್ಥಪೂರ್ಣವಾಗಿ ಆಚರಿಸಲಾವುದು, ಬೆಳಿಗ್ಗೆ 10 ಗಂಟೆಗೆ ನಗರದ ಟೌನ್‍ಹಾಲ್ ನಿಂದ ಅಶೋಕರಸ್ತೆ ಮೂಲಕ ಗಾಜಿನ ಮನೆಯವರೆಗೂ ಶಿವಯೋಗಿ ಸಿದ್ಧರಾಮೇಶ್ವರ ಭಾವಚಿತ್ರದೊಂದಿಗೆ ಮೆರವಣಿಗೆ ಹಮ್ಮಿಕೊಳ್ಳಲಾಗುವುದು, ಮೆರವಣಿಗೆ ಉದ್ದಕ್ಕೂ ಸಾಂಸ್ಕ್ರತಿಕ ಕಲಾತಂಡಗಳಿಂದ ಡೊಳ್ಳು ಕುಣಿತ, ಕಂಸಾಳೆ ನತ್ಯ, ಗಾರುಡಿಗ, ಗೊರವರ ಕುಣಿತ, ವೀರಗಾಸೆ, ನಂದಿಧ್ವಜ ಜತೆಯಲ್ಲಿ ನಾನಾ ಕಲಾ ತಂಡಗಳಿಂದ ಮೆರವಣಿಗೆ ಮಾಡಲಾಗುವುದು, ಜಯಂತಿ ಆಚರಣೆ ಒಂದು ಸಮುದಾಯಕ್ಕೆ ಸೀಮಿತವಾಗದೆ ಎಲ್ಲಾ ಜನಾಂಗದವರು, ಎಲ್ಲಾ ಇಲಾಖೆ ಅಧಿಕಾರಿಗಳು, ಸಾರ್ವಜನಿಕರು, ಸಂಘಟನೆಯ ಮುಖಂಡರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸುವಂತೆ ಕರೆ ನೀಡಿದರು.
ಮೆರವಣಿಗೆಗೆ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ಏರ್ಪಡಿಸುವುದು, ಜಯಂತಿ ಕಾರ್ಯಕ್ರಮದ ಮಹತ್ವದ ಬಗ್ಗೆ ವಿಶೇಷ ಉಪನ್ಯಾಸ ಹಮ್ಮಿಕೊಳ್ಳಲಾಗುವುದು, ಕಾರ್ಯಕ್ರಮಕ್ಕೆ ವೇದಿಕೆ ಸಿದ್ದತೆ, ಆಹ್ವಾನ ಪತ್ರಿಕೆ ಮುದ್ರಣ, ವಿತರಣೆ, ವಿಡಿಯೋ ಹಾಗೂ ಛಾಯಾಗ್ರಹಣ, ನಿರೂಪಣೆ, ಕರಪತ್ರ ಮುದ್ರಣ, ಸೇರಿದಂತೆ ಅಗತ್ಯವಿರುವ ಎಲ್ಲಾ ಕ್ರಮಗಳನ್ನು ಕೈಗೊಳ್ಳುವಂತೆ ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕ ಡಿ.ಎಂ.ರವಿಕುಮಾರ್‍ಗೆ ಸೂಚನೆ ನೀಡಿದ ಅಪರ ಜಿಲ್ಲಾಧಿಕಾರಿಯವರು, ಉಳಿದ ಸಿದ್ದತೆಗಳನ್ನು ಸಂಬಂಧಿಸಿದ ಆಯಾ ಇಲಾಖೆಗಳ ಮುಖ್ಯಸ್ಥರಿಗೆ ವಹಿಸಿಕೊಟ್ಟರು.
ಉಪವಿಭಾಗಾಧಿಕಾರಿ ಅಜಯ್, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ಶ್ರೀಧರ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸುರೇಶ್, ರಾಜ್ಯ ಬೋವಿ ಸಮಾಜದ ಅಧ್ಯಕ್ಷರಾದ ಟಿ.ವ್ಯೆ. ಕುಮಾರ್, ಉಪಾಧ್ಯಕ್ಷರಾದ ರವಿ ಪೂಜಾರಿ, ಭಾರತೀಯ ಬೋವಿ ಪರಿಷತ್‍ನ್ ಜಿಲ್ಲಾಧ್ಯಕ್ಷ ಓಂಕಾರ್, ಜಿಲ್ಲಾ ಬೋವಿ ಸಂಘದ ಅಧ್ಯಕ್ಷ ಉಮೇಶ್ ಹೆಚ್, ರಾಷ್ಟ್ರೀಯ ಸಿದ್ಧರಾಮೇಶ್ವರ ಒಡ್ ಯುವಸಂಘದ ಅಧ್ಯಕ್ಷರಾದ ಕೊತ್ತೂರು ಹನುಮಂತರಾಯಪ್ಪ, ಉಮೇಶ್ ಊರುಕೆರೆ, ಸೇರಿದಂತೆ ವಿವಿಧ ಸಂಘ ಸಂಸ್ಥೆಗಳ ಮುಖಂಡರು, ಪದಾಧಿಕಾರಿಗಳು ಸಭೆಯಲ್ಲಿ ಉಪಸ್ಥಿತರಿದ್ದರು.