ಬ್ರಹ್ಮಾವರ ಸಕ್ಕರೆ ಕಾರ್ಖಾನೆಯಲ್ಲಿ ನಡೆದ ಅವ್ಯವಹಾರದ  ತನಿಖೆಗಾಗಿ ಮಾಜಿ ಸಭಾಪತಿಗಳಾದ ಪ್ರತಾಪಚಂದ್ರ ಶೆಟ್ಟಿಯವರ ನೇತೃತ್ವದಲ್ಲಿ ರೈತಸಂಘದ ಪದಾಧಿಕಾರಿಗಳು ಹಲವಾರು ದಿನಗಳಿಂದ ಅಹೋರಾತ್ರಿ ಧರಣಿ ಸತ್ಯಾಗ್ರಹ  ನಡೆಸುತ್ತಿದ್ದು ಪ್ರತಿಭಟನಾಕಾರರ ಬೇಡಿಕೆಗೆ ಸ್ಪಂದಿಸಿ ಅವ್ಯವಹಾರದ  ತನಿಖೆಗೆ ಸೂಕ್ತ ಕ್ರಮ ಕೈಗೊಳ್ಳುವಂತೆ ವಿಧಾನಸಭಾ ಅಧಿವೇಶನದ ಸಂದರ್ಭದಲ್ಲಿ ಕಾರ್ಕಳ ಕಾಂಗ್ರೆಸ್ ನಾಯಕರಾದ ಉದಯ ಶೆಟ್ಟಿ ಮುನಿಯಾಲು ಅವರು  ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮನವಿ ಮಾಡಿದರು. 

ಮನವಿಗೆ ಪೂರಕವಾಗಿ ಸ್ಪಂದಿಸಿದ ಮುಖ್ಯಮಂತ್ರಿಗಳು ಕಾನೂನು ಕ್ರಮ ಜರುಗಿಸುವ ಕುರಿತು ಭರವಸೆಯನ್ನು ನೀಡಿದರು. ಈ ಸಂದರ್ಭದಲ್ಲಿ ಕಾರ್ಕಳ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಶುಭದ್ ರಾವ್,  ಮಾಜಿ ಪುರಸಭಾ ಅಧ್ಯಕ್ಷರಾದ ಸುಭಿತ್ ಎನ್.ಆರ್, ಪುರಸಭಾ ನಾಮನಿರ್ದೇಶಿತ ಸದಸ್ಯರಾದ ವಿವೇಕಾನಂದ ಶೆಣೈ, ಕೆ.ಎಮ್.ಎಪ್. ನಿರ್ದೇಶಕರಾದ ಸುಧಾಕರ ಶೆಟ್ಟಿ ಮುಡಾರು ಉಪಸ್ಥಿತರಿದ್ದರು.