ಉಡುಪಿ, ಅ 15: ಕರ್ನಾಟಕ ಸಾಹಿತ್ಯ ಅಕಾಡೆಮಿ ಬೆಂಗಳೂರು, ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ತೆಂಕನಿಡಿಯೂರು, ಉಡುಪಿ, ಸಮುದಾಯ ಸಾಂಸ್ಕೃತಿಕ ಸಂಘಟನೆ (ರಿ) ಕುಂದಾಪುರ  ಇವರ ಸಂಯುಕ್ತ ಆಶ್ರಯದಲ್ಲಿ ನಿರಂಜನ 100 ರ ನೆನಪಿನಲ್ಲಿ ಕಥೆಯ ರಂಗ ರೂಪಕ ಕಾರ್ಯಕ್ರಮವು ಅಕ್ಟೋಬರ್ 16 ರಂದು ಮಧ್ಯಾಹ್ನ 2 ಗಂಟೆಗೆ  ತೆಂಕನಿಡಿಯೂರು ಕಾಲೇಜು ಸಭಾಂಗಣದಲ್ಲಿ ನಡೆಯಲಿದೆ.

ಕಾಲೇಜಿನ ಪ್ರಾಂಶುಪಾಲ ಪ್ರೊ. ಸುರೇಶ್ ರೈ ಕೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕಾಲೇಜಿನ ಕನ್ನಡ ವಿಭಾಗದ ಮುಖ್ಯಸ್ಥ ಪ್ರೊ. ಜಯಪ್ರಕಾಶ್ ಶೆಟ್ಟಿ ಹೆಚ್, ಕುಂದಾಪುರ ಸಮುದಾಯ ಸಾಂಸ್ಕೃತಿಕ ಸಂಘಟನೆ (ರಿ) ಅಧ್ಯಕ್ಷ ಸದಾನಂದ ಬೈಂದೂರು, ರಂಗ ನಿರ್ದೇಶಕ ವಾಸುದೇವ ಗಂಗೇರ  ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.