ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಚೇರಿ ಹಾಗೂ ತಾಲೂಕು ಆರೋಗ್ಯ ಅಧಿಕಾರಿಗಳ ಕಚೇರಿ ಉಡುಪಿ ಇವರ ಸಂಯುಕ್ತ ಆಶ್ರಯದಲ್ಲಿ ಮಂಗಳವಾರ ನಗರದ ತಾಲೂಕು ಕಚೇರಿ ಸಭಾಂಗಣದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮದಿನಾಚರಣೆಯ ಪ್ರಯುಕ್ತ ನಡೆದ ವ್ಯಸನಮುಕ್ತ ದಿನಾಚರಣೆ ಕಾರ್ಯಕ್ರಮವನ್ನು ಹಿರಿಯ ಸಿವಿಲ್ ನ್ಯಾಯಾಧೀಶೆ ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್ ಉದ್ಘಾಟಿಸಿದರು.  

ತಹಶೀಲ್ದಾರ್ ರವಿ ಎಸ್ ಅಂಗಡಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು.  ಉಪತಹಶೀಲ್ದಾರ್ ಐರನ್ ನೊರೋನ್ನ ಪ್ರತಿಜ್ಞಾವಿಧಿ ಬೋಧಿಸಿದರು. 

ಆಪ್ತ ಸಮಾಲೋಚಕಿ ಸೌಜನ್ಯ ಶೆಟ್ಟಿ ಕಾರ್ಯಾಗಾರದ ಮಾಹಿತಿ ನೀಡಿದರು. ತಾಲೂಕು ಆರೋಗ್ಯ ಅಧಿಕಾರಿ ವಾಸುದೇವ ಉಪಾಧ್ಯಾಯ ಪ್ರಾಸ್ತಾವಿಕವಾಗಿ ಮಾತನಾಡಿದರು. ಹಿರಿಯ ಆರೋಗ್ಯ ನಿರೀಕ್ಷಣಾಧಿಕಾರಿ ದೇವಪ್ಪ ಪಟಗರ್ ಸ್ವಾಗತಿಸಿ, ವಂದಿಸಿದರು. ಕ್ಷೇತ್ರ ಆರೋಗ್ಯ ಶಿಕ್ಷಣಾಧಿಕಾರಿ ಚಂದ್ರಕಲಾ ನಿರೂಪಿಸಿದರು.