ಉಡುಪಿ, ಡಿ. 09: ಜಿಲ್ಲಾ ಗೃಹರಕ್ಷಕ ದಳ ಉಡುಪಿ ಜಿಲ್ಲೆ ಇವರ ವತಿಯಿಂದ ಅಖಿಲ ಭಾರತ ಗೃಹರಕ್ಷಕ ದಿನಾಚರಣೆ ಕಾರ್ಯಕ್ರಮವು ಡಿಸೆಂಬರ್ 11 ರಂದು ಬೆಳಗ್ಗೆ 9.30 ಕ್ಕೆ ನಗರದ ಜಿಲ್ಲಾ ಗೃಹರಕ್ಷಕ ದಳ ಕಚೇರಿ ಆವರಣದಲ್ಲಿ ನಡೆಯಲಿದೆ.

ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಕಾರ್ಯಕ್ರಮ ಉದ್ಘಾಟಿಸಲಿದ್ದು, ಜಿಲ್ಲಾ ಗೃಹರಕ್ಷಕ ದಳ ಸಮಾದೇಷ್ಟ ಡಾ. ರೋಶನ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಅರುಣ್ ಕೆ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ಎಸ್.ಟಿ ಸಿದ್ದಲಿಂಗಪ್ಪ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.