ಉಡುಪಿ:  ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಇಲಾಖೆಯ ಮೆಟ್ರಿಕ್ ನಂತರದ ಬಾಲಕ ಮತ್ತು ಬಾಲಕಿಯರ ವಿದ್ಯಾರ್ಥಿನಿಲಯಗಳ (ಪಿಯುಸಿ ಮತ್ತು ಪಿಯುಸಿ ಸಮಾನಾಂತರ ಕೋರ್ಸಿನ ವಿದ್ಯಾರ್ಥಿಗಳಿಗೆ ಮಾತ್ರ) ಪ್ರವೇಶಾತಿಗಾಗಿ ಹೊಸದಾಗಿ ಪ್ರವೇಶ ಬಯಸುವ ಪ್ರವರ್ಗ-1, 2ಎ, 2ಬಿ, 3ಎ, 3ಬಿ, ಪ.ಜಾತಿ/ಪ.ವರ್ಗ ಮತ್ತು ಇತರೆ ಜನಾಂಗಗಳಿಗೆ ಸೇರಿದ ವಿದ್ಯಾರ್ಥಿಗಳಿಂದ ವೆಬ್‍ಸೈಟ್ https://shp.karnataka.gov.in/bcwd ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನ. ಹೆಚ್ಚಿನ ಮಾಹಿತಿಗಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಹಾಗೂ ತಾಲೂಕು ಅಧಿಕಾರಿಗಳನ್ನು ಅಥವಾ ಸಹಾಯವಾಣಿ ಸಂಖ್ಯೆ: 8050770004 ಮತ್ತು 8050770005 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.