ಉಡುಪಿ, ನ. 21: ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ವತಿಯಿಂದ ನಡೆಯಲಿರುವ ಕೆ-ಸೆಟ್ -2024 ಪರೀಕ್ಷೆಗಳು ನವೆಂಬರ್ 24 ರಂದು ಜಿಲ್ಲೆಯ ಒಟ್ಟು 12 ಪರೀಕ್ಷಾ ಕೇಂದ್ರಗಳಲ್ಲಿ ನಡೆಯಲಿದ್ದು, ಪರೀಕ್ಷೆಗಳು ಸುಸೂತ್ರವಾಗಿ ಮತ್ತು ದೋಷರಹಿತವಾಗಿ ನಡೆಸಲು ಹಾಗೂ ನಡೆಯಬಹುದಾದದ ಎಲ್ಲಾ ರೀತಿಯ ಅವ್ಯವಹಾರಗಳನ್ನು ತಡೆಗಟ್ಟುವ ಸಲುವಾಗಿ ನಿಗಧಿಪಡಿಸಿದ ಎಲ್ಲಾ ಪರೀಕ್ಷಾ ಕೇಂದ್ರಗಳ ಸುತ್ತಲೂ ಜೆರಾಕ್ಸ್ ಅಂಗಡಿಗಳನ್ನು ಮುಚ್ಚಲು ಹಾಗೂ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಿ, ಭಾರತೀಯ ನಾಗರೀಕ ಸುರಕ್ಷಾ ಸಂಹಿತೆ 2023 ರ ಕಲಂ 163 ರನ್ವಯ ನಿಷೇಧಾಜ್ಞೆಯನ್ನು ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಆದೇಶಿಸಿರುತ್ತಾರೆ.