ಉಡುಪಿ: ಕುಂದಾಪುರ ತಾಲೂಕು ಕೋಟೇಶ್ವರ ಗ್ರಾಮದ ಮಹತೋಬಾರ  ಶ್ರೀ ಕೋಟಿ ಲಿಂಗೇಶ್ವರ ದೇವಸ್ಥಾನದ ರಥೋತ್ಸವ ಕಾರ್ಯಕ್ರಮವು ಡಿಸೆಂಬರ್ 14 ರಿಂದ 16 ರ ವರೆಗೆ ನಡೆಯಲಿರುವ ಹಿನ್ನೆಲೆ, 

ಈ ಸಂದರ್ಭದಲ್ಲಿ ಬಾರ್ ಮತ್ತು ವೈನ್‍ಶಾಪ್‍ಗಳು ತೆರೆದಿದ್ದಲ್ಲಿ ಮದ್ಯಪಾನಾಸಕ್ತರು ಮದ್ಯಪಾನ ಮಾಡಿ ಗಲಭೆ ಮಾಡುವ ಸಾಧ್ಯತೆ ಇರುವ ಹಿನ್ನೆಲೆ, ಕಾನೂನು ಸುವ್ಯವಸ್ಥೆ ಮತ್ತು ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಠಿಯಿಂದ ಕರ್ನಾಟಕ ಅಬಕಾರಿ ನಿಯಮಗಳು 1968 ರ ನಿಯಮ 3 ರಡಿ ನೀಡಿರುವ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಅಂಗಡಿಗಳನ್ನು ಕರ್ನಾಟಕ ಅಬಕಾರಿ ಕಾಯ್ದೆ 1965 ಕಲಂ 21 ರನ್ವಯ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ, ಕೋಟೇಶ್ವರ ಗ್ರಾಮ ಹಾಗೂ ಸದ್ರಿ ಗ್ರಾಮಕ್ಕೆ ಹೊಂದಿಕೊಂಡಿರುವ ಹಂಗಳೂರು, ಗೋಪಾಡಿ ಗ್ರಾಮಗಳ ವ್ಯಾಪ್ತಿಯಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ & ರೆಸ್ಟೋರೆಂಟ್ ಮತ್ತು ವೈನ್ ಶಾಪ್‍ಗಳ ಮದ್ಯ ಮಾರಾಟವನ್ನು ಡಿಸೆಂಬರ್ 15 ರ ಬೆಳಗ್ಗೆ 6 ಗಂಟೆಯಿಂದ ಡಿಸೆಂಬರ್ 16 ರ ರಾತ್ರಿ 12 ರವರೆಗೆ ಅಬಕಾರಿ ಸನ್ನದುಗಳನ್ನು ಮುಚ್ಚಲು ಆದೇಶಿಸಿ, ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟ ನಿಷೇಧಿಸಿ, ಜಿಲ್ಲಾ ದಂಡಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಆದೇಶಿಸಿರುತ್ತಾರೆ.