ಉಡುಪಿ, ಮಾರ್ಚ್ 27: ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್, ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಉಡುಪಿ ಇವರ ಸಹಯೋಗದಲ್ಲಿ ನವ ಜೀವನ – ವಿಶೇಷಚೇತನರಿಗೆ ಬ್ಯಾಟರಿ ಚಾಲಿತ ವಾಹನಗಳ ವಿತರಣಾ ಕಾರ್ಯಕ್ರಮವು ಮಾರ್ಚ್ 28 ರಂದು ಬೆಳಗ್ಗೆ 10 ಗಂಟೆಗೆ ನಗರದ ಹೋಟೆಲ್ ಚಿತಾರ ಇಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಜಿಲ್ಲಾಧಿಕಾರಿ ಡಾ.ಕೆ ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ನಾಗಭೂಷಣ ಉಡುಪ, ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ರತ್ನ, ಮಣಿಪಾಲ್ ಟೆಕ್ನಾಲಜೀಸ್ ಲಿಮಿಟೆಡ್‍ನ ಜನರಲ್ ಮ್ಯಾನೆಜರ್ ಹೆಚ್.ಆರ್ & ಸಿ.ಎಸ್.ಆರ್ ರೊನಾಲ್ಡ್ ಡಿ ಸೋಜಾ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.