ಉಡುಪಿ, ಅ. 03: 2021 ನೇ ಸಾಲಿನಲ್ಲಿ ಪ್ರಥಮ ಮುದ್ರಣವಾಗಿ ಪ್ರಕಟಗೊಂಡ ರಾಜ್ಯ ಮಟ್ಟದ ಪುಸ್ತಕ ಆಯ್ಕೆ ಸಮಿತಿಯಿಂದ ಆಯ್ಕೆಗಾಗಿ ಸ್ವೀಕರಿಸಿದ ಪುಸ್ತಕಗಳ ಆಯ್ಕೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದು, ಆಯ್ಕೆಯಾದ ಹಾಗೂ ಆಯ್ಕೆಯಾಗದ ಪುಸ್ತಕಗಳ ಪ್ರದರ್ಶನವನ್ನು ಅಕ್ಟೋಬರ್ 4 ರಿಂದ 5 ರವರೆಗೆ ಬೆಂಗಳೂರಿನ ಹಂಪಿ ನಗರದ ಪಶ್ಚಿಮ ವಲಯ, ನಗರ ಕೇಂದ್ರ ಗ್ರಂಥಾಲಯದ "ಗ್ರಂಥಾಂಗಣ" ಇಲ್ಲಿ ಏರ್ಪಡಿಸಲಾಗಿದೆ. ಇದರ ಪಟ್ಟಿಯನ್ನು ಉಡುಪಿ ಜಿಲ್ಲಾ ಹಾಗೂ ನಗರ ಕೇಂದ್ರ ಗ್ರಂಥಾಲಯಗಳ ಸೂಚನಾಫಲಕದಲ್ಲಿ ಅಳವಡಿಸಲಾಗಿದೆ.
ಈ ಕುರಿತು ಸಾರ್ವಜನಿಕ ಗ್ರಂಥಾಲಯ ಇಲಾಖೆ ವೆಬ್‍ಸೈಟ್ http://dpl.karnataka.gov.in ನಲ್ಲಿ ವೀಕ್ಷಿಸಬಹುದಾಗಿದೆ. ಪುಸ್ತಕ ಆಯ್ಕೆಗಾಗಿ ಸಲ್ಲಿಸಿದ ಲೇಖಕರು, ಲೇಖಕ-ಪ್ರಕಾಶಕರು ಮತ್ತು ಪುಸ್ತಕ ಮಾರಾಟಗಾರರು ಆಕ್ಷೇಪಣೆಗಳಿದ್ದಲ್ಲಿ ಅಕ್ಟೋಬರ್ 09 ರ ಸಂಜೆ 5.30ರ ಒಳಗಾಗಿ ಆಯುಕ್ತರು, ಸಾರ್ವಜನಿಕ ಗ್ರಂಥಾಲಯ ಇಲಾಖೆ, ವಿಶ್ವೇಶ್ವರಯ್ಯ ಮುಖ್ಯ ಗೋಪುರ, ನಾಲ್ಕನೇ ಮಹಡಿ ಡಾ.ಅಂಬೇಡ್ಕರ್ ವೀದಿ, ಬೆಂಗಳೂರು -560001, ಇಲ್ಲಿಗೆ ಲಿಖಿತವಾಗಿ ಮನವಿಗಳನ್ನು ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ :0820-2523438, ಅನ್ನು ಸಂಪರ್ಕಿಸಬಹುದಾಗಿದೆ ಎಂದು ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.