ಉಡುಪಿ, ಮೇ 22: ಜಿಲ್ಲಾದ್ಯಂತ ರಸ್ತೆ ಬದಿಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ತ್ಯಾಜ್ಯ ಎಸೆದಿರುವುದು ಕಂಡು ಬರುತ್ತಿದ್ದು, ಈ ತಿಂಗಳ ಅಂತ್ಯದಿಂದ ಮಳೆ ಪ್ರಾರಂಭವಾಗುವ ಸಾಧ್ಯತೆ ಇದ್ದು, ತ್ಯಾಜ್ಯ ವಿಲೇವಾರಿ ಮಾಡದೇ ಇದ್ದಲ್ಲಿ ತ್ಯಾಜ್ಯವು ನದಿ, ಕೆರೆ, ಸರೋವರ, ಸಮುದ್ರಕ್ಕೆ ಸೇರಿ ನೀರು ಕಲುಷಿತಗೊಳ್ಳುವ ಸಾಧ್ಯತೆ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ಜಿಲ್ಲಾದ್ಯಂತ ಮೇ 24 ರಂದು ಬೆಳಗ್ಗೆ 7 ಗಂಟೆಗೆ ಅಸ್ಪತ್ರೆ ಆವರಣ, ಪ್ರಾಥಮಿಕ ಆರೋಗ್ಯ ಕೇಂದ್ರ, ಅಂಗನವಾಡಿ, ಸರ್ಕಾರಿ ಶಾಲಾ-ಕಾಲೇಜುಗಳು ಹಾಗೂ ಸಾರ್ವಜನಿಕ ಸ್ಥಳಗಳಾದ ಕೆರೆ, ಉದ್ಯಾನವನ, ಬಸ್ ಸ್ಟ್ಯಾಂಡ್, ರಸ್ತೆ ಬೀದಿಗಳ ಸ್ವಚ್ಛತೆಯನ್ನು ನಗರ ಸ್ಥಳೀಯ ಸಂಸ್ಥೆಗಳು ಹಾಗೂ ಗ್ರಾಮ ಪಂಚಾಯತ್‍ಗಳು, ಸಂಘ ಸಂಸ್ಥೆಗಳು ಹಾಗೂ ಸಾರ್ವಜನಿಕರು ಸ್ವಚ್ಛತಾ ಕಾರ್ಯಕ್ರಮಗಳಲ್ಲಿ ಜಿಲ್ಲಾಡಳಿತದೊಂದಿಗೆ ಸಹಕರಿಸುವುದರೊಂದಿಗೆ ಅಭಿಯಾನವನ್ನು ಯಶಸ್ವಿಗೊಳಿಸುವಂತೆ ಜಿಲ್ಲಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.