ಉಡುಪಿ: ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ, ಪ್ರಾದೇಶಿಕ ಕಛೇರಿ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಭಾರತ್ ಸ್ಕೌಟ್ & ಗೈಡ್ಸ್ ಮತ್ತು ಉದ್ಧಿಮೆದಾರರು ಉಡುಪಿ ಇವರ ನೇತೃತ್ವದಲ್ಲಿ ವಿಶ್ವ ಪರಿಸರ ದಿನಾಚರಣೆ- 2025 ರ ಅಂಗವಾಗಿ “ಜಾಗತಿಕವಾಗಿ ಪ್ಲಾಸ್ಟಿಕ್ ಮಾಲಿನ್ಯವನ್ನು ಕೊನೆಗೊಳಿಸುವುದು” ಎಂಬ ಶೀರ್ಷಿಕೆಯಡಿಯಲ್ಲಿ ಮಲ್ಪೆ ಬೀಚ್ ನಲ್ಲಿ ಸ್ವಚ್ಛತಾ ಕಾರ್ಯಕ್ರಮ ಇತ್ತೀಚೆಗೆ ನಡೆಯಿತು.
ಈ ಸಂದರ್ಭದಲ್ಲಿ ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಯೋಗೀಶ್ ಪಿ.ಆರ್, ನಗರಸಭೆ ಆಯುಕ್ತ ಮಹೇಶ್, ಪರಿಸರ ಅಭಿಯಂತರರಾದ ರವಿಪ್ರಕಾಶ್, ಪರಿಸರ ಅಧಿಕಾರಿ ಕೆ.ಕೀರ್ತಿ ಕುಮಾರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.