ಉಡುಪಿ, ನ. 27: ಉಡುಪಿ ಜಿಲ್ಲಾ ಗೃಹರಕ್ಷಕರ ಜಿಲ್ಲಾ ಮಟ್ಟದ ವೃತ್ತಿಪರ ಮತ್ತು ಕ್ರೀಡಾಕೂಟದ ಸಮಾರೋಪ ಸಮಾರಂಭ ಕಾರ್ಯಕ್ರಮವು ನವೆಂಬರ್ 28 ರಂದು ಬೆಳಗ್ಗೆ 11.30 ಕ್ಕೆ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ.
ಕಾರ್ಯಕ್ರಮದಲ್ಲಿ ಹೆಚ್ಚುವರಿ ಪೊಲೀಸ್ ಅಧೀಕ್ಷಕ ಎಸ್.ಟಿ ಸಿದ್ದಲಿಂಗಪ್ಪ, ಡಾ. ಜಿ.ಶಂಕರ್ ಸರ್ಕಾರಿ ಮಹಿಳಾ ಕಾಲೇಜಿನ ಪಾಂಶುಪಾಲ ಡಾ. ಶ್ರೀಧರ್ ಪ್ರಸಾದ್, ಅಥ್ಲೆಟಿಕ್ ಅಸೋಸಿಯೇಷನ್ ಜಿಲ್ಲಾ ಅಧ್ಯಕ್ಷ ಹರಿಪ್ರಸಾದ್ ರೈ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.