ಉಡುಪಿ: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರ ವೇದಿಕೆ ಹಾಗೂ ವಿದ್ಯೋದಯ ಪದವಿಪೂರ್ವಕಾಲೇಜು ಉಡುಪಿ ಇವರ ಜಂಟಿಆಶ್ರಯದಲ್ಲಿ ಉಡುಪಿ ಜಿಲ್ಲಾ ಪದವಿಪೂರ್ವ ಕಾಲೇಜುಗಳ ಗಣಕ ವಿಜ್ಞಾನ ಉಪನ್ಯಾಸಕರಿಗೆ ಒಂದು ದಿನದ ಕಾರ್ಯಾಗಾರ ವಿದ್ಯೋದಯ ಪ.ಪೂ. ಕಾಲೇಜು ಉಡುಪಿ, ಆಗಸ್ಟ್  07 ರಂದು ಆಯೋಜಿಸಲಾಯಿತು. 

2025-26 ನೇ ಶೈಕ್ಷಣಿಕ ಸಾಲಿನ ಪಠ್ಯಕ್ರಮ, ತಾತ್ವಿಕ ಹಾಗೂ ಪ್ರಾಯೋಗಿಕ ಪರೀಕ್ಷೆಗಳು ಇತ್ಯಾದಿಗಳ ಬಗ್ಗೆ ಉಪನ್ಯಾಸಕರಿಗೆ ಮಾರ್ಗದರ್ಶನ ನೀಡಲಾಯಿತು. ಅಧ್ಯಕ್ಷತೆ ವಹಿಸಿದ್ದ ಉಡುಪಿ ವಿದ್ಯೋದಯ ಪ.ಪೂ.ಕಾಲೇಜಿನ ಪ್ರಾಂಶುಪಾಲರಾದ ಸಂದೀಪ್ ಕುಮಾರ್ ಕಾರ್ಯಾಗಾರದ ಮಹತ್ವದ ಕುರಿತು ಮಾತನಾಡಿದರು. ಕಾರ್ಯಕ್ರಮ ಉದ್ಘಾಟಿಸಿದ ಬಾರ್ಕೂರು ರುಕ್ಮಿಣಿ ಶೆಡ್ತಿ ಸ್ಮಾರಕ ರಾ.ಸ.ಪ್ರ. ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಅಸಿಸ್ಟೆಂಟ್ ಪ್ರೊಫೆಸರ್ ಲಕ್ಷಿತ್ ಪೂಜಾರಿಯವರು ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿ ಉಪನ್ಯಾಸಕರುಗಳೊಂದಿಗೆ ಸಂವಾದ ನಡೆಸಿ, ಮಾಹಿತಿ ನೀಡಿದರು. 

ಸಂಘದ ಅಧ್ಯಕ್ಷರಾದ ಜ್ಞಾನೇಶ್ ಕೋಟ್ಯಾನ್, ಗಣಕ ವಿಜ್ಞಾನ ವಿಭಾಗ ಮುಖ್ಯಸ್ಥರು, ಕ್ರಿಯೇಟಿವ್ ಪದವಿಪೂರ್ವಕಾಲೇಜು, ಕಾರ್ಕಳ ಪ್ರಾಸ್ತವಿಕ ನುಡಿಗಳನ್ನಾಡಿ, ಸ್ವಾಗತಿಸಿದರು. ಕಾರ್ಯದರ್ಶಿ ಶಕುಂತಲಾ ರಾಜೇಶ್ ಪಾಲನ್, ಗಣಕ ವಿಜ್ಞಾನ ವಿಭಾಗ ಮುಖ್ಯಸ್ಥರು, ವಿದ್ಯೋದಯ ಪ.ಪೂ. ಕಾಲೇಜು ಧನ್ಯವಾದ ಸಲ್ಲಿಸಿದರು, ಖಜಾಂಚಿ ಬಿನುಜಯಚಂದ್ರನ್ ಉಪಸ್ಥಿತರಿದ್ದರು, ಸ್ಮಿತಾ, ಗಣಕ ವಿಜ್ಞಾನ ಉಪನ್ಯಾಸಕಿ ಕ್ರಿಯೇಟಿವ್ ಪ.ಪೂ. ಕಾಲೇಜು ಕಾರ್ಕಳ ಕಾರ್ಯಕ್ರಮವನ್ನುನಿರೂಪಿಸಿದರು.