ಉಡುಪಿ, ಜೂನ್ 16: ಮಣಿಪಾಲದಲ್ಲಿ ತಂದೆಯೊಂದಿಗೆ ಅಡುಗೆ ಕೆಲಸ ಮಾಡಿಕೊಂಡಿದ್ದ ಸುಮಿತ್ (23) ಎಂಬ ಯುವಕನು ಮೇ 21 ರ ಸಂಜೆ ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿರುತ್ತಾರೆ.
5 ಅಡಿ 8 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಪೂರ ಶರೀರ ಹೊಂದಿದ್ದು, ಕನ್ನಡ, ಹಿಂದಿ ಹಾಗೂ ಭೋಜ್ಪುರಿ ಭಾಷೆ ಮಾತನಾಡುತ್ತಾರೆ. ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಮಣಿಪಾಲ ಪೊಲೀಸ್ ಠಾಣೆಯ ಪಿ.ಐ. ಮೊ.ನಂ: 9480805448, ಪಿ.ಎಸ್.ಐ ಮೊ.ನಂ: 9480805475 ಹಾಗೂ ದೂ.ಸಂಖ್ಯೆ: 0820-2570328 ಅನ್ನು ಸಂಪರ್ಕಿಸಬಹುದಾಗಿದೆ ಎಂದು ಮಣಿಪಾಲ ಪೊಲೀಸ್ ಠಾಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.