ಉಡುಪಿ, ನವೆಂಬರ್ 30: ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ ಉಡುಪಿ ಜಿಲ್ಲೆ ಹಾಗೂ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಹೆಬ್ರಿ ಇವರ ಸಹಯೋಗದೊಂದಿಗೆ ಯುವ ಸೌರಭ-ಯುವಕಲಾವಿದರ ಸಾಂಸ್ಕ್ರತಿಕ ಕಾರ್ಯಕ್ರಮವು ಡಿಸೆಂಬರ್ 3 ರಂದು ಬೆಳಗ್ಗೆ 9.15 ಕ್ಕೆ ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ನಡೆಯಲಿದೆ. 

ಇಂಧನ ಹಾಗೂ ಕನ್ನಡ ಮತ್ತು ಸಂಸ್ಕ್ರತಿ  ಇಲಾಖೆ ಸಚಿವ ವಿ.ಸುನಿಲ್ ಕುಮಾರ್‍ಕಾರ್ಯಕ್ರಮ ಉದ್ಘಾಟಿಸಲಿದ್ದು, ಹೆಬ್ರಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಂಶುಪಾಲ ಡಾ.ಪ್ರಸಾದ್‍ರಾವ್ ಎಂ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಸುಗಮ ಸಂಗೀತ, ನೃತ್ಯ, ಜಾನಪದ ಗೀತೆ, ಪೂಜಾ ಕುಣಿತ, ಮಹಿಳಾ ಡೊಳ್ಳು ಕುಣಿತ ಹಾಗೂ ಕಾಲೇಜಿನ ವಿದ್ಯಾರ್ಥಿಗಳಿಂದ ಗೊಂಬೆ ಮನೆ ನಾಟಕ ಪ್ರದರ್ಶನ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕ್ರತಿ ಇಲಾಖೆಯ ಸಹಾಯಕ ನಿರ್ದೇಶಕಿ ಪೂರ್ಣಿಮಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.