ಉಡುಪಿ: ಹಿಂದುಳಿದ ವರ್ಗಗಳ ಧೀಮಂತ ನಾಯಕ ರಾಜ್ಯದ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ರವರ 109 ನೇ ಜನ್ಮ ದಿನಾಚರಣೆಯ ಅಂಗವಾಗಿ ಆಗಸ್ಟ್ 20 ರಂದು ಜಿಲ್ಲಾ ಮಟ್ಟದಲ್ಲಿ ಕಾರ್ಯಕ್ರಮ ಏರ್ಪಡಿಸುವ ಕುರಿತು ಚರ್ಚಿಸುವ ಸಲುವಾಗಿ ಆಗಸ್ಟ್ 13 ರಂದು ಮಧ್ಯಾಹ್ನ 3 ಗಂಟೆಗೆ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ, ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಭೆ ಆಯೋಜಿಸಲಾಗಿದ್ದು, ಸದ್ರಿ ಸಭೆಯಲ್ಲಿ ಹಿಂದುಳಿದ ವರ್ಗಗಳ ವಿವಿಧ ಸಮುದಾಯಗಳ ಮುಖಂಡರುಗಳು ಭಾಗವಹಿಸಿ ಅಗತ್ಯ ಸಲಹೆ, ಸೂಚನೆ ನೀಡುವಂತೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
