ಉಡುಪಿ: ಹಾಲಾಡಿ ಸರ್ಕಲ್‍ನಲ್ಲಿ ಬಹು ಗ್ರಾಮ ಕುಡಿಯುವ ನೀರಿನ ಪೈಪ್‍ಲೈನ್ ಕಾಮಗಾರಿ ಸಂಬಂಧ ಮೇ 21 ರಂದು ಮೆಸ್ಕಾಂ ಇಲಾಖೆಯ ಹಾಲಾಡಿ ವಿದ್ಯುತ್ ಉಪಕೇಂದ್ರದಿಂದ ಹೊರಹೊಮ್ಮುವ ಎಫ್-11 CMC Udupi W/s ವಿದ್ಯುತ್ ಮಾರ್ಗವನ್ನು ತಾತ್ಕಾಲಿಕವಾಗಿ ನಿಲುಗಡೆಗೊಳಿಸಬೇಕಾಗಿರುವ ಹಿನ್ನೆಲೆ, ಸದರಿ ದಿನದಂದು ವಾರಾಹಿಯಿಂದ ಉಡುಪಿ ನಗರಸಭಾ ವ್ಯಾಪ್ತಿಗೆ ಕುಡಿಯುವ ನೀರಿನ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದ್ದು, ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ಉಡುಪಿ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.