ಉಡುಪಿ: ಉಡುಪಿ ನಗರಸಭೆಯ ಪೌರಕಾರ್ಮಿಕರ ದಿನಾಚರಣೆಯನ್ನು ಸೆಪ್ಟಂಬರ್ 23 ರಂದು ನಗರದ ಅಜ್ಜರಕಾಡು ಆರೂರು ಲಕ್ಷ್ಮೀ ನಾರಾಯಣ ರಾವ್ ಸ್ಮಾರಕ ಪುರಭವನದಲ್ಲಿ ಹಮ್ಮಿಕೊಂಡಿರುವ ಹಿನ್ನೆಲೆ, ಸದರಿ ದಿನದಂದು ಕಚೇರಿಯ ಸಾರ್ವಜನಿಕ ಕೆಲಸ ಕಾರ್ಯಗಳು ಹಾಗೂ ನಗರಸಭಾ ವ್ಯಾಪ್ತಿಯಲ್ಲಿ ತ್ಯಾಜ್ಯ ಸಂಗ್ರಹಣೆ ಇರುವುದಿಲ್ಲ. ಸಾರ್ವಜನಿಕರು ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.