ಉಡುಪಿ: ಕೃಷಿ ಇಲಾಖೆ ವತಿಯಿಂದ ಸಿರಿಧಾನ್ಯ ಮತ್ತು ಸಾವಯವ ಅಂತರಾಷ್ಟ್ರೀಯ ವಾಣಿಜ್ಯ ಮೇಳ-2025 ರ ಅಂಗವಾಗಿ ಗ್ರಾಹಕರಲ್ಲಿ ಮುಂದಿನ ಪೀಳಿಗೆಗೆ ಸಿರಿಧಾನ್ಯ ಬೆಳೆಗಳ ಬಗ್ಗೆ ಅರಿವು ಮೂಡಿಸುವ ಸಲುವಾಗಿ ಜಿಲ್ಲಾ ಮಟ್ಟದಲ್ಲಿ ಜನ ಪ್ರತಿನಿಧಿಗಳು, ಜಿಲ್ಲಾ ಮಟ್ಟದ ಅಧಿಕಾರಿಗಳು, ತಾಲೂಕು ಮಟ್ಟದ ಅಧಿಕಾರಿಗಳು, ವಿಜ್ಞಾನಿಗಳು, ಪ್ರಗತಿ ಪರ ರೈತರು ಮತ್ತು ಮಾರುಕಟ್ಟೆದಾರರ ಸಹಯೋಗದೊಂದಿಗೆ ಸಿರಿಧಾನ್ಯ ಹಬ್ಬ ಕಾರ್ಯಕ್ರಮವು ಜನವರಿ 11 ರಂದು ಬೆಳಗ್ಗೆ 10 ಗಂಟೆಗೆ ಉಡುಪಿಯ ಕೃಷ್ಣ ಮಠದ ರಾಜಾಂಗಣ ಸಭಾಂಗಣದಲ್ಲಿ ಹಾಗೂ ಸಿರಿಧಾನ್ಯ ರೋಡ್ ಶೋ ಕಾರ್ಯಕ್ರಮವು ಜನವರಿ 18 ರಂದು ಸಂಜೆ 4.30 ಕ್ಕೆ ಮಲ್ಪೆ ಕಡಲ ತೀರದಲ್ಲಿ ನಡೆಯಲಿದೆ.
ಸದರಿ ಕಾರ್ಯಕ್ರಮದಲ್ಲಿ ಭಾಗವಹಿಸಲು ಇಚ್ಚಿಸುವವರು ನಿಯೋಜಿತ ಸ್ಥಳಗಳಲ್ಲಿ ಮೇಲ್ಕಂಡ ದಿನಾಂಕ ಹಾಗೂ ಸಮಯಕ್ಕೆ ಹಾಜರಿದ್ದು ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ಸಹಕರಿಸುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.