ಉಡುಪಿ, ನ. 30: ಭಂಡಾರ್‍ಕಾರ್ಸ್ ಕಲಾ ಮತ್ತು ವಿಜ್ಞಾನ ಕಾಲೇಜು ಕುಂದಾಪುರ  ಹಾಗೂ ಉಡುಪಿ ಜಿಲ್ಲಾಡಳಿತದ ಸಹಯೋಗದೊಂದಿಗೆ ಡಿಸೆಂಬರ್ 2 ರಿಂದ 5 ರ ವರೆಗೆ ಬೆಳಗ್ಗೆ 9.30 ರಿಂದ ಸಂಜೆ 5 ಗಂಟೆಯವರೆಗೆ ಬೃಹತ್ ವಿಜ್ಞಾನ, ವಾಣಿಜ್ಯ, ಕಲೆ, ಪರಿಸರ, ಸಾಮಾನ್ಯ ಜ್ಞಾನ ಮತ್ತು ಶೈಕ್ಷಣಿಕ ವಸ್ತು ಪ್ರದರ್ಶನ ಕಾರ್ಯಕ್ರಮವನ್ನು ಕುಂದಾಪುರದ ಭಂಡಾರ್‍ಕಾರ್ಸ್ ಕಾಲೇಜಿನಲ್ಲಿ ಆಯೋಜಿಸಲಾಗಿದೆ.

ಡಿಸೆಂಬರ್ 2 ರಂದು ಪುರಮೆರವಣಿಗೆಯನ್ನು ಕುಂದಾಪುರ ತಹಶೀಲ್ದಾರ್ ಶೋಭಾಲಕ್ಷ್ಮೀ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಕುಂದಾಪುರ ಪುರಸಭೆ ಅಧ್ಯಕ್ಷ ಮೋಹನ್ ದಾಸ್ ಶೆಣೈ ಭಾಗವಹಿಸಲಿದ್ದಾರೆ.

ಡಿಸೆಂಬರ್ 3 ರಂದು ಶೈಕ್ಷಣಿಕ ಮಾಹಿತಿ ಮತ್ತು ವಸ್ತು ಪ್ರದರ್ಶನವನ್ನು ಶಾಸಕ ಕಿರಣ್ ಕುಮಾರ್ ಕೊಡ್ಗಿ, ತಾಲೂಕು ಆರೋಗ್ಯ ಇಲಾಖೆಯ ಸಹಕಾರದೊಂದಿಗೆ ಬೃಹತ್ ಆರೋಗ್ಯ ಮೇಳವನ್ನು ಶಾಸಕ ಗುರುರಾಜ್ ಗಂಟಿಹೊಳೆ ಉದ್ಘಾಟಿಸಲಿದ್ದಾರೆ.

ಸರ್ಕಾರಿ ಇಲಾಖೆಗಳ ಬೃಹತ್ ವಸ್ತು ಪ್ರದರ್ಶನವನ್ನು ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್ ಉದ್ಘಾಟಿಸಲಿದ್ದು, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಕೆ ಅರುಣ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ಕಾಲೇಜು ವಿದ್ಯಾರ್ಥಿಗಳ ವಸ್ತು ಪ್ರದರ್ಶನವನ್ನು ಸಹಾಯಕ ಆಯುಕ್ತ ಮಹೇಶ್ಚಂದ್ರ ಉದ್ಘಾಟಿಸಲಿದ್ದು, ಕುಂದಾಪುರ ತಾಲೂಕು ಪಂಚಾಯತ್ ಕಾರ್ಯನಿರ್ವಹಣಾಧಿಕಾರಿ ಡಾ. ರವಿಕುಮಾರ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದಾರೆ.

ವಸ್ತು ಪ್ರದರ್ಶನ ಮಳಿಗೆಗಳನ್ನು ಮಾಜಿ ಶಾಸಕ ಬಿ. ಅಪ್ಪಣ್ಣ ಹೆಗ್ಡೆ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಮಾಜಿ ಸಂಸದ ಕೆ. ಜಯಪ್ರಕಾಶ್ ಹೆಗ್ಡೆ, ಮಾಜಿ ಶಾಸಕ ಕೆ.ಗೋಪಾಲ ಪೂಜಾರಿ, ಉದ್ಯಮಿ ದಿನೇಶ್ ಹೆಗ್ಡೆ ಮೊಳಹಳ್ಳಿ, ಕುಂದಾಪುರ ಕಲಾಕ್ಷೇತ್ರದ ಅಧ್ಯಕ್ಷ ಕಿಶೋರ್ ಕುಮಾರ್, ನಗರ ಯೋಜನಾ ಪ್ರಾಧಿಕಾರದ ಅಧ್ಯಕ್ಷ ವಿನೋದ್ ಕ್ರಾಸ್ಟೋ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ಹರಿಪ್ರಸಾದ್ ಕಾನ್‍ಮಕ್ಕಿ, ಭಂಡಾರ್‍ಕಾರ್ಸ್ ಕಾಲೇಜು ಹಳೆ ವಿದ್ಯಾರ್ಥಿ ಸಂಘದ ಅಧ್ಯಕ್ಷ ಹರಿ ಚಾತ್ರ, ಕಾರ್ಯದರ್ಶಿ ಸಂದೇಶ್ ಕೆ, ಭಂಡಾರ್‍ಕಾರ್ಸ್ ಕಾಲೇಜು ಶಿಕ್ಷಕ-ರಕ್ಷಕ ಸಂಘದ ಅಧ್ಯಕ್ಷ ಸದಾನಂದ ಕಾಮತ್ ಹಾಗೂ ಕಾರ್ಯದರ್ಶಿ ಸಂಜೀವ ತೆಕ್ಕಟ್ಟೆ ಭಾಗವಹಿಸಲಿದ್ದಾರೆ.

ಡಿಸೆಂಬರ್ 4 ರಂದು ವೃತ್ತಿ ಮಾರ್ಗದರ್ಶನ ಹಾಗೂ ಕೈಗಾರಿಕಾ ಮಾಹಿತಿ ಶಿಬಿರವನ್ನು ಜಿಲ್ಲಾಧಿಕಾರಿ ಡಾ. ಕೆ ವಿದ್ಯಾಕುಮಾರಿ ಉದ್ಘಾಟಿಸಲಿದ್ದು, ಮುಖ್ಯ ಅತಿಥಿಗಳಾಗಿ ಉದ್ಯಮಿ ದತ್ತಾನಂದ ಗಂಗೊಳ್ಳಿ ಹಾಗೂ ಜನತಾ ಫಿಶ್ ಮಿಲ್ & ಆಯಿಲ್ ಪ್ರೋಡಕ್ಟ್ಸ್ ನ ಆನಂದ್ ಸಿ ಕುಂದರ್ ಭಾಗವಹಿಸಲಿದ್ದಾರೆ.

ಡಿಸೆಂಬರ್ 5 ರಂದು ಸಮಾರೋಪ ಸಮಾರಂಭದ ಅಧ್ಯಕ್ಷತೆಯನ್ನು ಭಂಡಾರ್‍ಕಾರ್ಸ್ ಕಾಲೇಜು ವಿಶ್ವಸ್ಥ ಮಂಡಳಿ ಅಧ್ಯಕ್ಷ ಶಾಂತಾರಾಂ ಎ ಭಂಡಾರ್‍ಕರ್ ವಹಿಸಲಿದ್ದು, ಉಡುಪಿ-ಚಿಕ್ಕಮಗಳೂರು ಲೋಕಸಭಾ ಸಂಸದ ಕೋಟ ಶ್ರೀನಿವಾಸ ಪೂಜಾರಿ, ಸಂಸದ ರಾಘವೇಂದ್ರ, ಲೆಕ್ಕ ಪರಿಶೋಧಕಿ ಶಾಂತಿ ಗಿರಿಧರ್, ಭಂಡಾರ್‍ಕಾರ್ಸ್ ಕಾಲೇಜು ಹಿರಿಯ ವಿಶ್ವಸ್ಥ ಶಾಂತಾರಾಂ ಪ್ರಭು, ಭಂಡಾರ್‍ಕಾರ್ಸ್ ಪದವಿ ಕಾಲೇಜು ಪ್ರಾಂಶುಪಾಲ ಡಾ. ಶುಭಕರಾಚಾರಿ, ಭಂಡಾರ್‍ಕಾರ್ಸ್ ಪದವಿಪೂರ್ವ ಕಾಲೇಜು ಪ್ರಾಂಶುಪಾಲ ಡಾ.ಜಿ.ಎಂ ಗೊಂಡ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.