ಉಡುಪಿ: ಉದ್ಯೋಗಸ್ಥ ಮಹಿಳೆಯರಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ಜಿಲ್ಲೆಯಲ್ಲಿ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಮುಖಾಂತರ 4 ಶಿಶುಪಾಲನಾ ಕೇಂದ್ರಗಳನ್ನು ತರೆಯಲಾಗಿದ್ದು, ಉದ್ಯೋಗಸ್ಥ ಮಹಿಳೆಯರು ಸುಗಮವಾಗಿ ಕಛೇರಿಗಳಲ್ಲಿ ಕೆಲಸ ನಿರ್ವಹಿಸಲು ಹಾಗೂ ಮಕ್ಕಳ ಆರೋಗ್ಯದ ಹಿತದೃಷ್ಟಿಯಿಂದ 6 ತಿಂಗಳಿನಿಂದ 6 ವರ್ಷದ ಮಕ್ಕಳ ಯೋಗಕ್ಷೇಮ, ರಕ್ಷಣೆ ಹಾಗೂ ಪೋಷಣೆಗೆ ಅನುವಾಗುವಂತೆ, ಹಾಲುಣಿಸುವ ಕೊಠಡಿ, ಮಕ್ಕಳಿಗೆ ಆಟಿಕೆಗಳು ಮತ್ತು ಪೂರಕ ಪೌಷ್ಟಿಕ ಆಹಾರದೊಂದಿಗೆ ಮಕ್ಕಳ ಲಾಲನೆ, ಪಾಲನೆ ಹಾಗೂ ಆರೋಗ್ಯ ತಪಾಸಣೆ ಮಾಡಲಾಗುತ್ತಿದೆ.
ಶಿಶುಪಾಲನಾ ಕೇಂದ್ರಗಳು ಬೆಳಗ್ಗೆ 9.30 ರಿಂದ ಸಂಜೆ 6 ಗಂಟೆಯವರೆಗೆ ಕಾರ್ಯನಿರ್ವಹಿಸುತ್ತಿದ್ದು, ಮಕ್ಕಳ ಲಾಲನೆ ಮತ್ತು ಪಾಲನೆಗಾಗಿ ಶಿಕ್ಷಕಿ ಮತ್ತು ಸಹಾಯಕಿಯರು ಕಾರ್ಯನಿರ್ವಹಿಸುತ್ತಿರುತ್ತಾರೆ. ಆಸಕ್ತ ಮಹಿಳೆಯರು ತಮ್ಮ ಮಕ್ಕಳನ್ನು ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಜಿಲ್ಲಾ ಪಂಚಾಯತ್‍ನ ಸಿ ಬ್ಲಾಕ್ ನೆಲಮಹಡಿ ದೂ.ಸಂ 9448951074 (ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟ ಉಡುಪಿ), ಉಡುಪಿ ನಗರದ ಸರಕಾರಿ ತಾಯಿ ಮಕ್ಕಳ ಆಸ್ಪತ್ರೆ ಎದುರುಗಡೆಯ ಮಹಾತ್ಮಾಗಾಂಧಿ ಶಾಲೆ, ದೂ.ಸಂ: 9448951074 (ಜಿಲ್ಲಾ ಮಹಿಳಾ ಮಂಡಳಿಗಳ ಒಕ್ಕೂಟ ಉಡುಪಿ), ಕುಂದಾಪುರದ ಎ.ಕೆ.ಜಿ ರಸ್ತೆಯ ಹಿತಾ ಹಾರ್ಮೋನಿ ಎದುರುಗಡೆಯ ಶ್ರೀದೇವಿ ನಸಿರ್ಂಗ್ ಹೋಮ್ ದೂ.ಸಂ:7619195452 (ಸ್ತ್ರೀಶಕ್ತಿ ಒಕ್ಕೂಟ ಕುಂದಾಪುರ) ಹಾಗೂ ಕಾರ್ಕಳದ ಕಿಸಾನ್ ಸಭಾ ಟ್ರಸ್ಟ್ ಬಳಿಯ ಮಹಿಳಾ ಸಾಂತ್ವನ ಮಹಿಳಾ ಸಹಾಯವಾಣಿ ಕೇಂದ್ರ ದೂ.ಸಂ:9449382787 (ತಾಲೂಕು ಮಹಿಳಾ ಮಂಡಳಿಗಳ ಒಕ್ಕೂಟ ಕಾರ್ಕಳ) ದ ಶಿಶುಪಾಲನ ಕೇಂದ್ರಗಳಲ್ಲಿ ನೋಂದಾಯಿಸಿ ಇದರ ಸದುಪಯೋಗ ಪಡೆದುಕೊಳ್ಳಬಹುದಾಗಿದೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.