ಉಡುಪಿ: ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಉಡುಪಿ ಜಿಲ್ಲೆ ಇವರ ಸಹಯೋಗದೊಂದಿಗೆ ಫಲಪುಷ್ಪ ಪ್ರದರ್ಶನ -2025 ವು ಜನವರಿ 25 ರಿಂದ 27 ರ ವರೆಗೆ ನಗರದ ದೊಡ್ಡಣಗುಡ್ಡೆಯ ಶಿವಳ್ಳಿ ಮಾದರಿ ತೋಟಗಾರಿಕಾ ಕ್ಷೇತ್ರದ ಪುಷ್ಪ ಹರಾಜು ಕೇಂದ್ರ (ರೈತ ಸೇವಾ ಕೇಂದ್ರ)ದ ಆವರಣದಲ್ಲಿ ನಡೆಯಲಿದೆ.
ಕಾರ್ಯಕ್ರಮವನ್ನು ಜನವರಿ 25 ರಂದು ಬೆಳಗ್ಗೆ 9.30 ಕ್ಕೆ ರಾಜ್ಯದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವೆ ಲಕ್ಷ್ಮೀ ಆರ್ ಹೆಬ್ಬಾಳ್ಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‍ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.
ಮುಖ್ಯ ಅತಿಥಿಗಳಾಗಿ ಗಣಿ ಮತ್ತು ಭೂ ವಿಜ್ಞಾನ ಹಾಗೂ ತೋಟಗಾರಿಕೆ ಇಲಾಖೆ ಸಚಿವ ಎಸ್.ಎಸ್ ಮಲ್ಲಿಕಾರ್ಜುನ, ಸಂಸದರಾದ ಬಿ.ವೈ ರಾಘವೇಂದ್ರ ಹಾಗೂ ಕೋಟ ಶ್ರೀನಿವಾಸ ಪೂಜಾರಿ, ಶಾಸಕರುಗಳಾದ ವಿ ಸುನಿಲ್ ಕುಮಾರ್, ಗುರುರಾಜ್ ಶೆಟ್ಟಿ ಗಂಟಿಹೊಳೆ, ಎ ಕಿರಣ್ ಕುಮಾರ್ ಕೊಡ್ಗಿ ಹಾಗೂ ಗುರ್ಮೆ ಸುರೇಶ್ ಶೆಟ್ಟಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಜಿಲ್ಲಾ ಕೃಷಿಕ ಸಮಾಜದ ಅಧ್ಯಕ್ಷ ಅಶೋಕ್ ಕುಮಾರ್ ಕೊಡ್ಗಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಸತ್ಯವತಿ ಜಿ, ತೋಟಗಾರಿಕೆ ಮತ್ತು ರೇಷ್ಮೆ ಇಲಾಖೆಯ ಸರ್ಕಾರದ ಕಾರ್ಯದರ್ಶಿ ಡಾ. ಶಮಾ ಇಕ್ಬಾಲ್, ತೋಟಗಾರಿಕೆ ನಿರ್ದೇಶಕ ಡಿ.ಎಸ್. ರಮೇಶ್, ಜಿಲ್ಲಾಧಿಕಾರಿ ಡಾ. ಕೆ. ವಿದ್ಯಾಕುಮಾರಿ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಡಾ. ಅರುಣ್ ಕೆ, ತೋಟಗಾರಿಕೆ ಅಪರ ನಿರ್ದೇಶಕ ಕೆ.ಎಂ ಪರಶಿವ ಮೂರ್ತಿ, ಮೈಸೂರು ವಿಭಾಗದ ತೋಟಗಾರಿಕೆ ಜಂಟಿ ನಿರ್ದೇಶಕ ಹೆಚ್.ಎಂ ನಾಗರಾಜ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.