ಉಡುಪಿ: ವಿವಿಧ ಕಾರಣಗಳಿಂದ ತೆರವಾಗಿರುವ ಜಿಲ್ಲೆಯ ಹೆಬ್ರಿ ತಾಲೂಕಿನ ಮಡಾಮಕ್ಕಿ ಗ್ರಾಮ ಪಂಚಾಯತ್ನ ಮುಂದಿನ ಅವಧಿಗೆ ಅಧ್ಯಕ್ಷರ ಸ್ಥಾನ (ಮೀಸಲಾತಿ-ಸಾಮಾನ್ಯ)ವನ್ನು ಆಯ್ಕೆ ಮಾಡುವ ಸಲುವಾಗಿ ಹೆಬ್ರಿ ತಾಲೂಕು ಪಂಚಾಯತ್ ತಾಲೂಕು ಯೋಜನಾಧಿಕಾರಿ ಮಹೇಶ ಹಾಗೂ ನಾಡ್ಪಾಲು ಗ್ರಾಮ ಪಂಚಾಯತಿಯ ಅಧ್ಯಕ್ಷರ ಸ್ಥಾನ (ಮೀಸಲಾತಿ-ಅನುಸೂಚಿತ ಜಾತಿ ಮಹಿಳೆ)ವನ್ನು ಆಯ್ಕೆ ಮಾಡುವ ಸಲುವಾಗಿ ಕಾರ್ಕಳ ತಾಲೂಕು ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕ ಶ್ರೀನಿವಾಸ ಅವರನ್ನು ಗೊತ್ತುಪಡಿಸಿದ ಅಧಿಕಾರಿಯನ್ನಾಗಿ ನೇಮಿಸಲಾಗಿದ್ದು, ಸದ್ರಿರವರು ಕರ್ನಾಟಕ ಪಂಚಾಯತ್ ರಾಜ್ ಅಧಿನಿಯಮ 1993 ರ ಪ್ರಕರಣ 45 ಹಾಗೂ (ಗ್ರಾಮ ಪಂಚಾಯತ್ ಅಧ್ಯಕ್ಷ ಚುನಾವಣೆ) ನಿಯಮಗಳು 1995 ರ ನಿಯಮ 4 ರಿಂದ 11 ರವರೆಗಿನ ನಿಯಮದಂತೆ ಚುನಾವಣೆ ನಡೆಸಿ, ಅಧ್ಯಕ್ಷರುಗಳನ್ನು ಆಯ್ಕೆ ಮಾಡುವಂತೆ ಜಿಲ್ಲಾ ಚುನಾವಣಾಧಿಕಾರಿಯೂ ಆಗಿರುವ ಜಿಲ್ಲಾಧಿಕಾರಿ ಡಾ. ಕೆ ವಿದ್ಯಾ ಕುಮಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
