ಉಡುಪಿ: ಜಿಲ್ಲಾ ಪಂಚಾಯತ್ ಹಾಗೂ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಡುಪಿ ಇವರ ವತಿಯಿಂದ ಆಗಸ್ಟ್ 15 ರಂದು ಬೆಳಗ್ಗೆ 11.30 ಕ್ಕೆ ಪರ್ಕಳ ಶೆಟ್ಟಿಬೆಟ್ಟು ಸರಕಾರಿ ಸಂಯುಕ್ತ ಪ್ರೌಢಶಾಲೆಯಲ್ಲಿ “ಸುಜ್ಞಾನ” ಸಭಾಂಗಣ ಉದ್ಘಾಟನೆ ಹಾಗೂ ಪ್ರಾಥಮಿಕ ವಿಭಾಗದ ವಿದ್ಯಾರ್ಥಿಗಳಿಗೆ ಹಳೆ ವಿದ್ಯಾರ್ಥಿ ಸಂಘದ ವತಿಯಿಂದ ಉಚಿತ ಟ್ರ್ಯಾಕ್ ಸೂಟ್ ವಿತರಣಾ ಕಾರ್ಯಕ್ರಮ ನಡೆಯಲಿದೆ. 

ಕಾರ್ಯಕ್ರಮವನ್ನು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ, ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮೀ ಆರ್ ಹೆಬ್ಬಾಳಕರ್ ಉದ್ಘಾಟಿಸಲಿದ್ದು, ಶಾಸಕ ಯಶ್‍ಪಾಲ್ ಎ ಸುವರ್ಣ ಅಧ್ಯಕ್ಷತೆ ವಹಿಸಲಿದ್ದಾರೆ.

ಕಾರ್ಯಕ್ರಮದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಎಸ್ ಮಧು ಬಂಗಾರಪ್ಪ, ಸಂಸದರಾದ ಕೋಟ ಶ್ರೀನಿವಾಸ ಪೂಜಾರಿ, ವಿಧಾನಪರಿಷತ್ ಶಾಸಕರುಗಳಾದ ಎಸ್.ಎಲ್. ಭೋಜೇಗೌಡ, ಮಂಜುನಾಥ್ ಭಂಡಾರಿ, ಡಾ. ಧನಂಜಯ ಸರ್ಜಿ ಹಾಗೂ ಕಿಶೋರ್ ಕುಮಾರ್ ಪುತ್ತೂರು, ನಗರಸಭೆ ಅಧ್ಯಕ್ಷ ಪ್ರಭಾಕರ ಪೂಜಾರಿ, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಜಿಲ್ಲಾ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಉಡುಪಿ ತಾಲೂಕು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್, ನಗರಸಭಾ ಸದಸ್ಯೆ ಅಶ್ವಿನಿ ಅರುಣ ಪೂಜಾರಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ರೋಹಿಣಿ ಸಿಂಧೂರಿ ದಾಸರಿ, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.