ಉಡುಪಿ: ಜಿಲ್ಲಾ ಗೃಹರಕ್ಷಕ ದಳ ಉಡುಪಿ ಜಿಲ್ಲೆ ಇವರ ವತಿಯಿಂದ ಪಶ್ಚಿಮ ವಲಯ ಮಟ್ಟದ ವೃತ್ತಿಪರ ಕ್ರೀಡಾಕೂಟ ಉದ್ಘಾಟನಾ ಸಮಾರಂಭವು ಡಿಸೆಂಬರ್ 16 ರಂದು ಸಂಜೆ 4.30 ಕ್ಕೆ ನಗರದ ಅಜ್ಜರಕಾಡು ಮಹಾತ್ಮಗಾಂಧಿ ಕ್ರೀಡಾಂಗಣದಲ್ಲಿ ನಡೆಯಲಿದೆ.

ಕ್ರೀಡಾಕೂಟವನ್ನು ಕರಾವಳಿ ಕಾವಲು ಪಡೆಯ ಪೊಲೀಸ್ ಅಧೀಕ್ಷಕ ಮಿಥುನ್ ಹೆಚ್.ಎನ್ ಉದ್ಘಾಟಿಸಲಿದ್ದು, ಗೃಹರಕ್ಷಕ ದಳದ ಜಿಲ್ಲಾ ಸಮಾದೇಷ್ಟ ಡಾ. ರೋಶನ್ ಕುಮಾರ್ ಶೆಟ್ಟಿ ಅಧ್ಯಕ್ಷತೆ ವಹಿಸಲಿದ್ದಾರೆ. ಕಾರ್ಯಕ್ರಮದಲ್ಲಿ ಅಪರ ಜಿಲ್ಲಾಧಿಕಾರಿ ಮಮತಾ ದೇವಿ ಜಿ.ಎಸ್, ಅಂತರಾಷ್ಟ್ರೀಯ ಕ್ರೀಡಾಪಟು ರೋಹಿತ್ ಕುಮಾರ್ ಕಟೀಲ್, ಕಾಪು ದಂಡತೀರ್ಥ ಸಮೂಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಪ್ರಶಾಂತ ಕುಮಾರ್ ಶೆಟ್ಟಿ, ಉಡುಪಿ ಪ್ರಸಾದ್ ನೇತ್ರಾಲಯದ ಆಡಳಿತ ನಿರ್ದೇಶಕ ಡಾ. ಕೃಷ್ಣ ಪ್ರಸಾದ್ ಹಾಗೂ ಮತ್ತಿತರರು ಭಾಗವಹಿಸಲಿದ್ದಾರೆ.