ಉಡುಪಿ: ಉಡುಪಿ ನಗರಸಭಾ 35 ವಾರ್ಡುಗಳಲ್ಲಿನ ಎಲ್ಲಾ ಸಾರ್ವಜನಿಕರು ತಮ್ಮ ಮನೆ ಹಾಗೂ ವಾಣಿಜ್ಯ ಕಟ್ಟಡಗಳಲ್ಲಿ ಉತ್ಪತ್ತಿಯಾಗುವ ಕಟ್ಟಡ ತ್ಯಾಜ್ಯಗಳು, ತೆಂಗಿನ ಮಡಲು, ಗಿಡಗಂಟಿ, ಗಾರ್ಡನ್ ತ್ಯಾಜ್ಯ ಇತ್ಯಾದಿಗಳನ್ನು ರಸ್ತೆ ಬದಿಗೆ ಹಾಗೂ ಮಳೆ ನೀರು ಹರಿಯುವ ತೋಡಿಗೆ ಅಥವಾ ಚರಂಡಿಗೆ ಎಸೆಯುತ್ತಿರುವುದು ಕಂಡು ಬಂದಿದ್ದು, ಇದರಿಂದಾಗಿ ಮಳೆ ನೀರು ಸರಾಗವಾಗಿ ಹರಿಯಲು ಹಾಗೂ ರಸ್ತೆ ಬದಿಗೆ ಹಾಕಿರುವ ತೆಂಗಿನ ಮಡಿಲಿನಿಂದಾಗಿ ಘನತ್ಯಾಜ್ಯ ವಿಲೇವಾರಿಗೆ ತೊಂದರೆ ಉಂಟಾಗಿರುತ್ತದೆ.
ಸಾರ್ವಜನಿಕ ಪ್ರದೇಶಗಳಲ್ಲಿ ಹಾಗೂ ರಸ್ತೆ ಬದಿಗಳಲ್ಲಿ ತೆಂಗಿನ ಮಡಲು ಮತ್ತು ಇತರೆ ತ್ಯಾಜ್ಯವನ್ನು ಎಸೆಯುತ್ತಿರುವುದು ಕಂಡು ಬಂದಲ್ಲಿ ದಂಡ ವಿಧಿಸಲಾಗುವುದು. ಆದ್ದರಿಂದ ಸಾರ್ವಜನಿಕರು ಮೇಲ್ಕಂಡ ತ್ಯಾಜ್ಯವನ್ನು ವೈಜ್ಞಾನಿಕವಾಗಿ ವಿಲೇವಾರಿ ಮಾಡಿ, ನಗರಸಭೆಯೊಂದಿಗೆ ಸಹಕರಿಸುವಂತೆ ನಗರಸಭೆ ಪೌರಾಯುಕ್ತರ ಕಚೇರಿ ಪ್ರಕಟಣೆ ತಿಳಿಸಿದೆ.