ಉಡುಪಿ: ಡಾ. ಶಿವರಾಮ ಕಾರಂತ ಟ್ರಸ್ಟ್ ವತಿಯಿಂದ ಎಸ್.ವಿ. ಹೆಚ್‍ ಕನ್ನಡ ಮಾಧ್ಯಮ ಪ್ರೌಢ ಶಾಲೆ, ಇನ್ನಂಜೆ ಇವರ ಸಹಯೋಗದಲ್ಲಿ ಮಕ್ಕಳಿಗಾಗಿ ಕಾರಂತರು-3 ಪ್ರೌಢಶಾಲಾ ವಿದ್ಯಾರ್ಥಿಗಳಿಗೆ ಡಾ. ಕಾರಂತರ ಪರಿಚಯ ರಂಗವಲ್ಲಿಯ ಮೂಲಕ ಕಾರಂತರು ಕಾರ್ಯಕ್ರಮವು ಆಗಸ್ಟ್ 28 ರಂದು ಬೆಳಿಗ್ಗೆ  10.15 ಕ್ಕೆ ಇನ್ನಂಜೆಯ ಎಸ್.ವಿ. ಹೆಚ್‍ ಕನ್ನಡ ಮಾಧ್ಯಮ ಪ್ರೌಢ ಶಾಲೆಯಲ್ಲಿ ಆಯೋಜಿಸಲಾಗಿದೆ. 

ಕಾರ್ಯಕ್ರಮವನ್ನುಎಸ್.ವಿ.ಹೆಚ್ ಪದವಿ ಪೂರ್ವಕಾಲೇಜಿನ ಪ್ರಾಂಶುಪಾಲ ರಾಜೇಂದ್ರ ಪ್ರಭು ಉದ್ಘಾಟಿಸಲಿದ್ದು, ಡಾ. ಶಿವರಾಮ ಕಾರಂತ ಟ್ರಸ್ಟಿನ ಅಧ್ಯಕ್ಷ ಡಾ. ಗಣನಾಥ ಶೆಟ್ಟಿ ಎಕ್ಕಾರು ಅಧ್ಯಕ್ಷತೆ ವಹಿಸಲಿದ್ದಾರೆ.

ನಿವೃತ್ತ ಶಿಕ್ಷಕ ಸತ್ಯ ಸಾಯಿಪ್ರಸಾದ್ ಬಂಟಕಲ್ ಮುಖ್ಯ ಅತಿಥಿಗಳಾಗಿ ಭಾಗವಹಿಸಲಿದ್ದು, ಖ್ಯಾತ ರಂಗವಲ್ಲಿ ಕಲಾವಿದೆ ಡಾ.ಭಾರತಿ ಮರವಂತೆ ಉಪನ್ಯಾಸ ನೀಡಲಿದ್ದಾರೆ ಎಂದು ಡಾ. ಶಿವರಾಮ ಕಾರಂತ ಟ್ರಸ್ಟಿನ ಸದಸ್ಯ ಕಾರ್ಯದರ್ಶಿಗಳ ಪ್ರಕಟಣೆ ತಿಳಿಸಿದೆ.