ಉಡುಪಿ, ಮೇ 21:  ಎ, ಬಿ, ಒ ರಕ್ತದ ಗುಂಪನ್ನು ಕಂಡುಹಿಡಿದ ಡಾ. ಕಾರ್ಲ್ ಲ್ಯಾಂಡ್ ಸ್ಟೇನಿಯರ್‍ರವರ ಹುಟ್ಟುಹಬ್ಬವನ್ನು ಸ್ಮರಿಸಿ ಪ್ರತಿ ವರ್ಷ ವಿಶ್ವದಾದ್ಯಂತ ಜೂನ್ 14 ರಂದು ವಿಶ್ವ ರಕ್ತದಾನಿಗಳ ದಿನಾಚರಣೆಯನ್ನು ಆಚರಿಸಲಾಗುತ್ತಿದ್ದು, ಈ ಸಂದರ್ಭದಲ್ಲಿ ರಾಜ್ಯ ರೆಡ್‍ಕ್ರಾಸ್ ಸಂಸ್ಥೆಯಿಂದ ಹಮ್ಮಿಕೊಳ್ಳುವ ರಾಜ್ಯಮಟ್ಟದ ಕಾರ್ಯಕ್ರಮದಲ್ಲಿ ಕನಿಷ್ಠ ಇಪ್ಪತ್ತೈದಕ್ಕೂ ಹೆಚ್ಚು ಬಾರಿ ರಕ್ತದಾನ ಮಾಡಿರುವ ದಾನಿಗಳನ್ನು ಹಾಗೂ ಜಿಲ್ಲಾ ಘಟಕದಿಂದ ಕನಿಷ್ಠ 15 ಬಾರಿ ಮೇಲ್ಪಟ್ಟು ರಕ್ತದಾನ ಮಾಡಿರುವ ದಾನಿಗಳನ್ನು ಗುರುತಿಸಿ ಗೌರವಿಸಿ ಸನ್ಮಾನಿಸಲಾಗುವುದು.

ಆದ್ದರಿಂದ ರಕ್ತದಾನಿ ಅಥವಾ ಅವರಿಗೆ ಸಂಬಂಧಿಸಿದವರು ರಕ್ತದಾನಕ್ಕೆ ಸಂಬಂಧಿಸಿದ ಪ್ರಮಾಣ ಪತ್ರಗಳ ದಾಖಲೆಯ ಪ್ರತಿ, ವಿಳಾಸ ಹಾಗೂ ಮೊಬೈಲ್ ಸಂಖ್ಯೆಗಳ ವಿವರಗಳೊಂದಿಗೆ ಕಾರ್ಯದರ್ಶಿ, ಭಾರತೀಯ ರೆಡ್‍ಕ್ರಾಸ್ ಸಂಸ್ಥೆ, ಉಡುಪಿ ಜಿಲ್ಲಾ ಘಟಕ, ರೆಡ್‍ಕ್ರಾಸ್ ಭವನ, ಬ್ರಹ್ಮಗಿರಿ ಉಡುಪಿ ಇವರಿಗೆ ಮೇ 26 ರ ಒಳಗಾಗಿ ಸಲ್ಲಿಸಬಹುದಾಗಿದೆ ಎಂದು ಜಿಲ್ಲಾ ರೆಡ್‍ಕ್ರಾಸ್ ಘಟಕದ ಕಚೇರಿ ಪ್ರಕಟಣೆ ತಿಳಿಸಿದೆ.